ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅರನ್ನು ಹೊಗಳಿದ್ದಕ್ಕೆ ಶ್ರೀನಿವಾಸ ಪ್ರಸಾದ ಅವರನ್ನು ಮುಖ್ಯಮಂತ್ರಿ ಸಿಎಂ ಸಂಪುಟದಿಂದ ಕೈಬಿಟ್ಟಿದ್ದಾರೆಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ, ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮಗೆ ಬೇಡವಾದವರನ್ನು ಮಾತ್ರ ಸಂಪುಟದಿಂದ ದೂರವಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರಾಜ್ಯದಲ್ಲಿ ಗುಂಡಾಗಿರಿ ನಡೆಯುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡಗಿದ್ದಾರೆ.
ಸಂಪುಟದಲ್ಲಿ ಸ್ಥಾನ ದೊರೆಯದ ಅತೃಪ್ತ ಶಾಸಕರು ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕರ ಆಸ್ತಿ ಪಾಸ್ತಿಯನ್ನು ಹಾನಿ ಮಾಡುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಪ ಮತ್ತು ರಾಜ್ಯ ಗೃಹ ಖಾತೆ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ