ಇಂದಿನಿಂದ 2ದಿನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿ ಆಯೋಜಿಸಿರುವ ಜಿ20 ಔತಣಕೂಟದಲ್ಲಿ ಪಾಲ್ಗೊಳ್ಳದಿರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಕೆಲವು ಕಾರಣಗಳನ್ನು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯನವರು G20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಅಧಿಕೃತವಾಗಿ ತಿಳಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳಿಂದ ತಿಳಿದುಬಂದಿದೆ. ಆದರೆ ವಾಸ್ತವದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅತಿಥಿಗಳ ಪಟ್ಟಿಯಲ್ಲಿ ಇಲ್ಲ ಎಂಬ ಕಾರಣಕ್ಕೆ ಅಸಮಾಧಾನ ಇರುವುದರಿಂದ ಔತಣಕೂಟಕ್ಕೆ ಹೋಗದಿರಲು ತೀರ್ಮಾನಿಸಿದ್ದಾರೆ ಅಂತಾನು ಎನ್ನಲಾಗಿದೆ.