ಅಧಿಕಾರಿಗಳು, ಜಿಲ್ಲಾಡಳಿತ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಜನರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಬೇಕು. ಜನದ್ರೋಹಿಗಳಾಗಬೇಡಿ ಸಾರ್ವಜನಿಕ ಸಮಸ್ಯೆಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಿ. ವಿನಾಕಾರಣ ವಿಳಂಬ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಕೆರೆಗಳ ಒತ್ತುವರಿ ವಿಚಾರದಲ್ಲಿ ಡಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಭೂಮಿ ಒತ್ತುವರಿ ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ತೇವೆ ಎಂದು ಸಿಎಂ ಹೇಳಿದರು. ಮರಳು ಮಾಫಿಯಾದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಾ. ಏನು ಮಾಡುತ್ತೀರಿ ಎಂದು ಸಚಿವರಿಗೆ ಕ್ಲಾಸ್ ತೆಗೆದುಕೊಂಡರು.
ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದ ಎಲ್ಲಾ ಡಿಸಿಗಳು, ಸಿಇಒಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ಕಡ್ಡಾಯ ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿದರು.