Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ ಬಗೆಹರಿಸಲು ಸರ್ವಪಕ್ಷಗಳ ಜೊತೆ ಸಿಎಂ ಸಿದ್ದರಾಮಯ್ಯ ಮೀಟಿಂಗ್

Siddaramaiah

Krishnaveni K

ಬೆಂಗಳೂರು , ಭಾನುವಾರ, 14 ಜುಲೈ 2024 (20:06 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾನುವಾರ ವಿಧಾನಸೌಧ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು. 

ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸಚಿವ ಸಂಪುಟದ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಮೋಹನ್‌ ಕಾತರಕಿ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್,  ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸರ್ವಪಕ್ಷ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ನೀಡಿದ ವಿವರಗಳ ಹೈಲೈಟ್ಸ್.. .
 
*11-7-2024 ಕಾವೇರಿ ನೀರು ನಿಯಂತ್ರಣ ಸಮಿತಿಯ 3 ನೇ ಸಭೆ ನಡೆದು, ಜುಲೈ 12 ನೇ ದಿನಾಂಕದಿಂದ ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1 tmc ಯಂತೆ 20 tmc ನೀರು ಬಿಡಲು ಆದೇಶಿಸಿದ್ದಾರೆ. 
 
ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 tmc, July ನಲ್ಲಿ 31.24tmc ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 tmc ಬಿಡಬೇಕಾಗಿದೆ. ಇಲ್ಲಿಯವರೆಗೂ 5 tmc ಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ.
 
ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜು12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, CWMA ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು. 
 
ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
 
ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63 % ಮಾತ್ರ ಭರ್ತಿ ನೀರು ಆಗಿದೆ.
 
ಕಬಿನಿ ಜಲಾಶಯ ಭರ್ತಿ ಯಾಗಿದ್ದು,  ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ.
 
ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಆಡ್ತೀವಿ ಎಂದು CWMC ಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಅಧಿವೇಶನಕ್ಕೆ ಪೂರ್ವಭಾವಿಯಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ