ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಅದ್ಧೂರಿ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಇತರ ಸಚಿವರು ಬಿಎಂಟಿಸಿ ಬಸ್ ನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ವಿಧಾನಸೌಧದಿಂದ ಮೆಜೆಸ್ಟಿಕ್ ಗೆ ಆಗಮಿಸಿದರು.
ಬಿಎಂಟಿಸಿ ಬಸ್ ಡಿಪೋ 10ರ ಕೆ ಎ 57 ಎಫ್ 5324 ಸಂಖ್ಯೆಯ ಬಸ್ ನಲ್ಲಿ ಪ್ರಯಾಣಿಸಿದ್ದು, ಮೆಜೆಸ್ಟಿಕ್ ನಲ್ಲಿ ಬಸ್ ಇಳಿದು ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ವಿತರಿಸಿದರು. ಈ ಮೂಲಕ ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಅಧಿಕೃತ ಚಾಲನೆ ನೀಡಿದರು.