ಸಿಎಂ ಸಿದ್ದರಾಮಯ್ಯ- ಜಗದೀಶ್ ಶೆಟ್ಟರ್ ನಡುವೆ ಟಾಕ್ ಫೈಟ್

Webdunia
ಬುಧವಾರ, 15 ನವೆಂಬರ್ 2017 (14:04 IST)
ಮಹದಾಯಿ ಸಮಸ್ಯೆ ಇತ್ಯರ್ಥಿ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್‌ರತ್ತ ಬೆರಳು ತೋರಿ ಬಾಲ್ ಈಸ್ ಇನ್ ಯೂವರ್ ಕೋರ್ಟ್ ಎಂದು ನೀಡಿದ ಹೇಳಿಕೆಯನ್ನು ಕಾಂಗ್ರೆಸ್ ಸದಸ್ಯರು ಸ್ವಾಗತಿಸಿದರು.
ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರವಿರುವುದರಿಂದ ಬಿಜೆಪಿ ನಾಯಕರು ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು. ಕೇವಲ ಹೇಳಿಕೆ ನೀಡುವುದರಿಂದ ಯೋಜನೆ ಜಾರಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಬಿಜೆಪಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮುಂದಿನ ತಿಂಗಳಲ್ಲಿ ಸಿಹಿ ಸುದ್ದಿ ದೊರೆಯಲಿದೆ ಎಂದು ಹೇಳುತ್ತಾರೆ. ಇಷ್ಟು ದಿನಗಳ ಕಾಲ ಬಿಜೆಪಿ ನಾಯಕರು ಯಾಕೆ ಮೌನವಾಗಿದ್ದರು. ಯಾಕೆ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
 
ರಾಜ್ಯ ಸರಕಾರ, ಪ್ರಧಾನಿ ಮೋದಿಯವರ ಬಳಿ ಎರಡು ಬಾರಿ ನಿಯೋಗ ತೆಗೆದುಕೊಂಡು ಹೋಗಿದೆ. ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದೆ. ಆದರೆ, ಬಿಜೆಪಿ ನಾಯಕರು ಮಾತ್ರ ಮಹದಾಯಿ ಯೋಜನೆ ಜಾರಿಗೆ ಸ್ಪಂದಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments