ಸಿಎಂ ಕುರ್ಚಿ ಬಗ್ಗೆ ಕೇಳಿದ್ದಕ್ಕೆ ಸಿದ್ದರಾಮಯ್ಯಗೆ ಕೋಪ

Krishnaveni K
ಶುಕ್ರವಾರ, 31 ಜನವರಿ 2025 (17:31 IST)
ಬೆಂಗಳೂರು: ಇನ್ನು ಐದು ವರ್ಷ ನೀವೇ ಸಿಎಂ ಅಂತಲ್ವಾ ಎಂದು ಮಾಧ್ಯಮಗಳು ಪ್ರಶ್ನೆ ಕೇಳಿದಾಗಿ ಸಿದ್ದರಾಮಯ್ಯ ಪಿತ್ತ ನೆತ್ತಿಗೇರಿಸಿಕೊಂಡು ರೇಗಾಡಿದ ಘಟನೆ ನಡೆದಿದೆ.
 
ರಾಜ್ಯದಲ್ಲಿ ಪದೇ ಪದೇ ಸಿಎಂ ಬದಲಾವಣೆ ಬಗ್ಗೆ  ಚರ್ಚೆಯಾಗುತ್ತಿದೆ. ಈ ನಡುವೆ ಇಂದು ಸ್ವತಃ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿಎಂ ಬದಲಾವಣೆಯಿಲ್ಲ, ಐದು ವರ್ಷಕ್ಕೂ ತಮ್ಮ ತಂದೆಯವರೇ ಸಿಎಂ ಎಂದಿದ್ದರು.
 
ಇದರ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯಗೇ ಮಾಧ್ಯಮಗಳು ಈ ಪ್ರಶ್ನೆ ಕೇಳಿದಾಗ ಅವರು ಸಿಟ್ಟಾದರು. ಯಾರೀ ಹೇಳಿದ್ದು ನಿಮಗೆ?  ಈ ಪ್ರಶ್ನೆ ನನ್ನ ಬಳಿ ಕೇಳಬೇಡಿ ಎಂದು ಎಷ್ಟು ಸಾರಿ ಹೇಳಬೇಕು ಎಂದು ಸಿಟ್ಟಿನಿಂದಲೇ ಕೇಳಿದರು.
 
ಆದರೆ ಆಗ ಮಾಧ್ಯಮಗಳು ಈ ವಿಚಾರವನ್ನು ನಿಮ್ಮ ಪುತ್ರನೇ ಹೇಳಿದ್ದು ಎಂದಾಗ ಸಿಎಂ ಕೋಪ ಶಾಂತವಾಯಿತು. ಬಳಿಕ ಮಾತನಾಡಿದ ಅವರು ‘ನೋಡ್ರೀ ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಅವರು ತೆಗೆದುಕೊಳ್ಳುವ ನಿರ್ಧಾರಗಳಿಗೆ ನಾವು ಬದ್ಧರಾಗಿರುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments