Select Your Language

Notifications

webdunia
webdunia
webdunia
webdunia

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಶುಕ್ರವಾರ, 15 ಆಗಸ್ಟ್ 2025 (17:04 IST)
ಬೆಂಗಳೂರು: ಇಂದು ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ಮನೆಯೊಂದರಲ್ಲಿ ನಡೆದ ಸ್ಪೋಟದಿಂದಾಗಿ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಇಂದು ಸ್ಪೋಟ ನಡೆದ ಸ್ಥಳಕ್ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್‌ ಸ್ಪೋಟಗೊಂಡು ಅವಘಡ ಸಂಭವಿಸಿದೆ ಎಂಬುದು ಪೊಲೀಸರು ಹಾಗೂ ಬಿಬಿಎಂಪಿಯವರ ಪ್ರಾಥಮಿಕ ವರದಿ.

ಈ ದುರ್ಘಟನೆಯಲ್ಲಿ ಒಂದು ಸಾವಾಗಿದೆ, 9 ಜನರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ಬಾಲಕನಿಗೆ ರೂ.5 ಲಕ್ಷ ಪರಿಹಾರ ನೀಡಲಾಗುವುದು ಹಾಗೂ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಘಟನೆಯಲ್ಲಿ ಹಾನಿಗೊಳಗಾದ ಮನೆಗಳನ್ನು ರಿಪೇರಿ ಮಾಡಿಕೊಡುವಂತೆ ಸೂಚನೆ ನೀಡಿದ್ದೇನೆ’ ಎಂದು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ