Select Your Language

Notifications

webdunia
webdunia
webdunia
webdunia

ಪರಿಶಿಷ್ಟ ಮಕ್ಕಳಿಗೆ ಬಂಪರ್ ಕೊಡುಗೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಮಕ್ಕಳಿಗೆ ಬಂಪರ್ ಕೊಡುಗೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

Sampriya

ಬೆಂಗಳೂರು , ಶುಕ್ರವಾರ, 5 ಜುಲೈ 2024 (18:50 IST)
ಬೆಂಗಳೂರು: ಐಎಎಸ್, ಐಆರ್‌ಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆ ನಡೆಸುವ ಎಸ್‌ಸಿ, ಎಸ್ಟಿ ಮಕ್ಕಳಿಗೆ ದೆಹಲಿಯಲ್ಲಿ ಉತ್ತಮ ಹಾಸ್ಟೇಲ್‌ ಕಟ್ಟಿಸುವ ಜತೆಗೆ ತಿಂಗಳಿಗೆ  15 ಸಾವಿರ ರೂಪಾಯಿ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಸದ್ಯ ಇದೀಗ 10 ಸಾವಿರ ನೀಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು. ಅದಲ್ಲದೆ ಹಾಸ್ಟೆಲ್‌ನಲ್ಲಿ ಹೈಟೆಕ್ ಲೈಬ್ರೆರಿ ನಿರ್ಮಾಣ ಮಾಡಲಾಗುತ್ತದೆ ಎಂದರು.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಪರಿಷತ್ ಸಭೆಯ ಕೊನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಲಾಖೆಯ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ನೀಡಿದರು.

*2024-25 ನೇ ಸಾಲಿಗೆ scsp/tsp ನಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು action plan ಅನುಮೋದನೆ ಮಾಡಲಾಗಿದೆ.

*ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 160000 ಕೋಟಿ. ಇದರಲ್ಲಿ scsp/tsp ಗೆ ಸುಮಾರು 39121.46 ಕೋಟಿ scsp/tsp ಅಡಿ 34 ಇಲಾಖೆಗಳಿಗೆ ಹಂಚಿಕೆ ಮಾಡಿರುವ ಹಣ action plan ನಲ್ಲಿದೆ.

*ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ.

*ಕಳೆದ ವರ್ಷಕ್ಕಿಂತ ಈ ವರ್ಷ  3900 ಕೋಟಿ ಹೆಚ್ಚಾಗಿದೆ. 3900 ಕೋಟಿ ಹೆಚ್ಚುವರಿ ಹಣ ಈ ವರ್ಷ ನೀಡಿದ್ದೇವೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ಸೇಶಕ್ಕೆ  ಪೂರಕವಾಗಿ  ಕೆಲಸ ಮಾಡಬೇಕು.

*ಶೇ100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ.

*ಕಾಯ್ದೆಯಲ್ಲಿದ್ದ 7D ರದ್ದು ಮಾಡಿದ ರೀತಿಯಲ್ಲೇ 7C ಕೂಡ ರದ್ದು ಮಾಡಬೇಕು ಎನ್ನುವ ಶಾಸಕ ನರೇಂದ್ರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಬಾದಕಗಳನ್ನು ಪರಿಶೀಲಿಸಲಾಗುವುದು ಎಂದರು.

*ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು.

*ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ75 ರಷ್ಟು ಸೀಟು, ಉಳಿದ ಶೇ25 ರಷ್ಟು ಸೀಟುಗಳನ್ನು ಇತರೆ ಪ್ರದೇಶದ ವಿಧ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು.

*ಸರ್ಕಾರಿ ಶಾಲೆಗಿಂತ ಕ್ರೈಸ್ ನಲ್ಲಿ ಓದಿರುವ ಬಡ ವಿಧ್ಯಾರ್ಥಿನಿ ಕ್ರೈಸ್ ಶಾಲೆಯಲ್ಲಿ ಓದಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಇದನ್ನು ಪ್ರೋತ್ಸಾಹಿಸುತ್ತಲೇ ಇತರೆ ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು.

*ಬಜೆಟ್ ನಲ್ಲಿ ನಾವು ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನೂ ನೀವು ಜಾರಿ ಮಾಡಲೇಬೇಕು.

*ಹಿಂದಿನ ಬಿಜೆಪಿ ಸರ್ಕಾರ ಮೂರು ವರ್ಷ ಕ್ರೈಸ್ ಮಕ್ಕಳಿಗೆ ಬಾತ್ ರೂಮ್ ಕಿಟ್ ಕೊಡ್ಲೇ ಇಲ್ಲ. ಈಗ ನಾವು ಸರಿಯಾಗಿ ವಿತರಿಸುತ್ತಿದ್ದೇವೆ.

*ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಾರೆ ಎನ್ನುವುದು ಕಂಡುಬಂದಿದೆ. ಇದಕ್ಕೆ ಅವಕಾಶ ಆಗಬಾರದು. ಮನೆಗೆ ಕರೆದೊಯ್ಯದಂತೆ ಪೋಷಕರಿಗೆ ಒಪ್ಪಿಸಬೇಕು.

*ಹಳ್ಳಿಗಾಡು, ಬಡ ಕುಟುಂಬಗಳಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ತಲುಪಿಸಬೇಕು. ಇದರಲ್ಲಿ ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

*ನಾವು ಕೊಟ್ಟ ಅನುದಾನ ಆಯಾ ಉದ್ದೇಶಗಳಿಗೇ ಬಳಕೆಯಾಗಬೇಕು.

*ಇದರಲ್ಲಿ ಯಾವುದೇ ರಾಜಿ ಇಲ್ಲದಂತೆ ಆಯಾ ಸಮುದಾಯಗಳಿಗೆ ಸವಲತ್ತು ತಲುಪಿಸಬೇಕು.

*ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗುವುದು.

*10 ವರ್ಷದಲ್ಲಿ ಈ ಯೋಜನೆಯಿಂದ ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ‌ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು.

*3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು.

*ಈ ವರ್ಷದ action plan ಅನ್ನು ಈ ಸಭೆಯಲ್ಲಿ ಶಾಸಕರು/ಸಚಿವರು/ ಅಧಿಕಾರಿಗಳು ನೀಡಿದ ಸಲಹೆಗಳ ಸಮೇತ ಜಾರಿ ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್‌ನೊಳಗೆ ಮೋದಿ ಸರ್ಕಾರದ ಪತನ, ಭವಿಷ್ಯ ನುಡಿದ ಲಾಲು ಪ್ರಸಾದ್ ಯಾದವ್