Select Your Language

Notifications

webdunia
webdunia
webdunia
webdunia

ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Sampriya

ಬೆಂಗಳೂರು , ಬುಧವಾರ, 31 ಜುಲೈ 2024 (15:06 IST)
Photo Courtesy X
ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ 5₹ ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಡಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.

ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ.

ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿನಿಗೆ ಎದೆನೋವು, ಆಸ್ಪತ್ರೆಯತ್ತ ಬಸ್ ಚಾಲನೆ ಮಾಡಿ ಜೀವ ರಕ್ಷಿಸಿದ ಬಸ್ ಡ್ರೈವರ್, ಕಂಡಕ್ಟರ್‌