Select Your Language

Notifications

webdunia
webdunia
webdunia
webdunia

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

Siddaramaiah

Krishnaveni K

ಬೆಂಗಳೂರು , ಗುರುವಾರ, 4 ಡಿಸೆಂಬರ್ 2025 (15:16 IST)
ಬೆಂಗಳೂರು: ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್ ಇದು ಎಂದರೂ ತಪ್ಪಾಗಲಾರದು. ಸಿಎಂ ಸಿದ್ದು ಈಗ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಹೈಕಮಾಂಡ್ ಅಣತಿ ಮೇರೆಗೆ ಸಿಎಂ ಸಿದ್ದರಾಮಯ್ಯ ಎರಡು ಬಾರಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಮಾಧ್ಯಮಗಳ ಮುಂದೆ ಅಧಿವೇಶನಕ್ಕೆ ಸಂಬಂಧಪಟ್ಟಂತೆ ಎಂದರೂ ಅಧಿಕಾರ ಹಂಚಿಕೆ ಕುರಿತು ಎದ್ದಿದ್ದ ವಿವಾದ ತಣ್ಣಗಾಗಿಸಲು ಈ ಮೀಟಿಂಗ್ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ.

ಇದೀಗ ಎರಡು ಬ್ರೇಕ್ ಫಾಸ್ಟ್ ಮೀಟಿಂಗ್ ಗಳ ಬಳಿಕ ಇಬ್ಬರೂ ನಾಯಕರು ನಮ್ಮ ನಡುವೆ ಭಿನ್ನಾಭಿಪ್ರಾಯವಿಲ್ಲ ಎನ್ನುತ್ತಿದ್ದಾರೆ. ಆದರೆ ಒಳಗೊಳಗೇ ಕುರ್ಚಿ ಕದನದ ಕಸರತ್ತು ನಡೆಯುತ್ತಿದೆ ಎನ್ನಲಾಗಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ ಈಗ ಸಚಿವರ ಜೊತೆ ಎರಡನೇ ಬಾರಿಗೆ ಸಭೆ ನಡೆಸಿದ್ದಾರೆ.

ನಿನ್ನೆ ಮತ್ತು ಇಂದು ಸಚಿವರ ಜೊತೆ ಸತತವಾಗಿ ಸಭೆ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಯಥಾವತ್ತಾಗಿ ಮಾಧ್ಯಮಗಳ ಮುಂದೆ ಇದು ಸದನದಲ್ಲಿ ವಿಪಕ್ಷಗಳನ್ನು ಎದುರಿಸುವ ಬಗ್ಗೆ ಕಾರ್ಯತಂತ್ರ ರೂಪಿಸಲು ನಡೆಯುತ್ತಿರುವ ಸಭೆ ಎಂದಿದ್ದಾರೆ. ಆದರೆ ಇಲ್ಲೂ ಇದಕ್ಕೆ ಹೊರತಾಗಿ ಬೇರೆ ಕಾರ್ಯತಂತ್ರಗಳೂ ಇಲ್ಲಿ ನಡೆಯುತ್ತಿರಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ