ಎಸ್‌ಬಿಐ ಅಧಿಕಾರಿ ಮೇಲಿನ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

Sampriya
ಬುಧವಾರ, 21 ಮೇ 2025 (15:16 IST)
ಬೆಂಗಳೂರು: ನಾನು ಎಂದಿಗೂ ಕನ್ನಡದಲ್ಲಿ ಮಾತಾಡಲ್ಲ, ಹಿಂದಿಯಲ್ಲೇ ಮಾತಾಡ್ತೀನಿ ಎಂದು ಗ್ರಾಹಕನ ಬಳಿ ದರ್ಪದಿಂದ ನಡೆದುಕೊಂಡ ಎಸ್‌ಬಿಐ ಮ್ಯಾನೇಜರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಅದಲ್ಲದೆ ಎಸ್‌ಬಿಐ ವ್ಯವಸ್ಥಾಪಕಿ ವಿರುದ್ಧ ಎಸ್‌ಬಿಐ ಕ್ರಮಕೈಗೊಂಡಿರುವುದನ್ನು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ವ್ಯವಹರಿಸುವಂತೆ ಗ್ರಾಹಕರು ಹೇಳಿದಾಗ ನಾನು ಎಂದಿಗೂ ಕನ್ನಡ ಮಾತನಾಡುವುದಿಲ್ಲ ಹಿಂದಿ ಮಾತನಾಡುವೆ ಎಂದು ಎಸ್‌ಬಿಐ ಬ್ರ್ಯಾಂಚ್ ಒಂದರ ಮ್ಯಾನೇಜರ್ ಹೇಳಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು.

ಚಂದಾಪುರದ ಸೂರ್ಯಸಿಟಿಯ ಎಸ್‌ಬಿಐ ಬ್ರ್ಯಾಂಚ್ ಮ್ಯಾನೇಜರ್ ಕನ್ನಡ ಮಾತಾಡುವುದಿಲ್ಲ ಎಂದು ಧಿಮಾಕು ತೋರಿಸಿದ್ದಾರೆ. ಕೂಡಲೇ ಈಕೆಯ ಮೇಲೆ ಕ್ರಮ ಆಗಬೇಕು ಎಂದು ಕನ್ನಡಿಗರು ಆಗ್ರಹಿಸಿದ್ದರು.

ಹಾಗೆಯೇ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಇಂದು ಪ್ರತ್ಯೇಕವಾಗಿ ಎರಡು ಸ್ಥಳಗಳಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು. ಇವೆಲ್ಲವುದರ ನಡುವೆ ಎಸ್‌ಬಿಐ ವ್ಯವಸ್ಥಾಪಕಿಯ ವರ್ಗಾವಣೆ ಮಾಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಎಸ್‌ಬಿಐ ಶಾಖಾ ವ್ಯವಸ್ಥಾಪಕರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರನ್ನು ಕಡೆಗಣಿಸುತ್ತಿರುವುದು ತೀವ್ರವಾಗಿ ಖಂಡನೀಯ” ಎಂದು ಹೇಳಿದ್ದಾರೆ.

“ಅಧಿಕಾರಿಯನ್ನು ವರ್ಗಾವಣೆ ಮಾಡುವ ತ್ವರಿತ ಕ್ರಮವನ್ನು ಎಸ್‌ಬಿಐ ಕೈಗೊಂಡಿದ್ದು ಅದನ್ನು ನಾವು ಪ್ರಶಂಸಿಸುತ್ತೇವೆ. ಈ ವಿಷಯ ಈಗ ಇತ್ಯರ್ಥಕ್ಕೆ ಬಂದಿದೆ ಎಂದು ಪರಿಗಣಿಸಬಹುದು. ಆದರೆ ಇಂತಹ ಘಟನೆಗಳು ಮರುಕಳಿಸಬಾರದು. ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಮಾತನಾಡುವ ಪ್ರಯತ್ನವನ್ನು ಮಾಡಬೇಕು” ಎಂದು ತಿಳಿಸಿದ್ದಾರೆ.

“ಭಾರತದಾದ್ಯಂತ ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಬೇಕೆಂದು ನಾನು ಹಣಕಾಸು ಸಚಿವಾಲಯ ಮತ್ತು ಹಣಕಾಸು ಸೇವೆಗಳ ಇಲಾಖೆಗೆ ಒತ್ತಾಯಿಸುತ್ತೇನೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದು” ಎಂದು ಮುಖ್ಯಮಂತ್ರಿಗಳು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments