Select Your Language

Notifications

webdunia
webdunia
webdunia
webdunia

ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ಆಗಮಿಸಿದ ಸಿಎಂ

ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ಆಗಮಿಸಿದ ಸಿಎಂ
ನವದೆಹಲಿ: , ಬುಧವಾರ, 16 ಆಗಸ್ಟ್ 2017 (20:05 IST)
ಹೈಕಮಾಂಡ್‌ನೊಂದಿಗೆ ಕೆಲ ವಿಷಯಗಳ ಬಗ್ಗೆ ಚರ್ಚಿಸಲು ಆಗಮಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ನಿರ್ಧರಿಸಿರುವ ಜೆಡಿಎಸ್ ಪಕ್ಷದ ಏಳು ಬಂಡಾಯ ಶಾಸಕರನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪರಿಚಯಿಸುವುದು ಕೂಡಾ ಕಾರ್ಯಕ್ರಮವಾಗಿದೆ ಎಂದು ತಿಳಿಸಿದ್ದಾರೆ.
 
ಖಾಲಿಯಾಗಿರುವ ಮೂರು ಸಚಿವ ಸ್ಥಾನಗಳನ್ನು ಭರ್ತಿ ಮಾಡುವುದು, ವಿಧಾನಪರಿಷತ್‌ಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು.
 
ಜೆಡಿಎಸ್ ಪಕ್ಷದ ಬಂಡಾಯ ಶಾಸಕರಾದ ಜಮೀರ್ ಆಹ್ಮದ್ ಮತ್ತು ಇತರ ಶಾಸಕರು ಈಗಾಗಲೇ ನವದೆಹಲಿಗೆ ಆಗಮಿಸಿದ್ದು, ಅವರೊಂದಿಗೆ ಒಂದು ಸುತ್ತಿನ ಮಾತುಕತೆಯ ನಂತರ, ಹೈಕಮಾಂಡ್‌ನೊಂದಿಗೆ ಅಂತಿಮ ಚರ್ಚೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳ ಲವ್ ಜಿಹಾದ್‌ ಪ್ರಕರಣದ ತನಿಖೆ ಎನ್‌ಐಎಗೆ: ಸುಪ್ರೀಂಕೋರ್ಟ್