Publish Date: Fri, 31 May 2024 (12:50 IST)
Updated Date: Fri, 31 May 2024 (12:52 IST)
ಬೆಂಗಳೂರು: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರಗೆ ರಾಜೀನಾಮೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ತೀವ್ರ ಹೋರಾಟ ನಡೆಸಿತ್ತು. ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದಿತ್ತು. ನಿನ್ನೆ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವ ಯತ್ನವೂ ನಡೆಸಿದ್ದರು.
ಕಾಂಗ್ರೆಸ್ ಹೈಕಮಾಂಡ್ ಕೂಡಾ ಅಸಮಾಧಾನ ವ್ಯಕ್ತಪಡಿಸಿತ್ತು ಎಂದು ವರದಿಯಾಗಿತ್ತು. ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಸಚಿವ ನಾಗೇಂದ್ರಗೆ ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ರಾಜೀನಾಮೆ ನೀಡಲು ಸಿಎಂ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದಿತ್ತು. ಜೊತೆಗೆ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ನಲ್ಲಿ ಚಂದ್ರಶೇಖರ್ ಸಚಿವರ ಹೆಸರನ್ನೂ ಉಲ್ಲೇಖಿಸಿದ್ದರು. ಹೀಗಾಗಿ ನಾಗೇಂದ್ರ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿದ್ದವು.