ದೇಶಕ್ಕೆ ಯಾರಾದರೂ ಚಿನ್ನ ತನ್ನಿ, ನೆರವು ನಾವು ಕೊಡ್ತೀವಿ: ಸಿಎಂ ಸಿದ್ದರಾಮಯ್ಯ

Krishnaveni K
ಸೋಮವಾರ, 2 ಡಿಸೆಂಬರ್ 2024 (09:25 IST)
ಬೆಂಗಳೂರು:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
 
ಕರ್ನಾಟಕ ಒಲಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.
 
ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ಬೆಳ್ಳಿ  ಪದಕ ಪಡೆದವರಿಗೆ 4 ಕೋಟಿ ಹಣ ಇಟ್ಟಿದ್ದೇವೆ. ಆದರೆ ಯಾರೂ ಪದಕ ತರ್ತಾನೇ ಇಲ್ಲ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ ಎಂದು ಕರೆ ನೀಡಿದರು. 
 
ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.
 
ಗೋವಿಂದರಾಜು ಅವರು ಒಲಂಪಿಕ್ ಸಂಸ್ಥೆ ಅಧ್ಯಕ್ಷರಾಗಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ. ನಾನು ಬಜೆಟ್ ರೂಪಿಸುವಾಗ ಚರ್ಚೆಯಲ್ಲಿ ಕುಳಿತು ಕ್ರೀಡಾಕ್ಷೇತ್ರಕ್ಕೆ ಅಗತ್ಯವಾದ ಎಲ್ಲವನ್ನೂ ಸೇರಿಸುತ್ತಾರೆ. ನಾನು ಕ್ರೀಡಾಪಟು ಅಲ್ಲದಿದ್ದರೂ ಕ್ರೀಡಾಪ್ರೇಮಿ. ನಾನು ಶಾಲಾ, ಕಾಲೇಜಿನಲ್ಲಿ ಎಲ್ಲಾ ಕ್ರೀಡೆಗಳಲ್ಲೂ ಭಾಗವಹಿಸುತ್ತಿದ್ದೆ. ಒಂದೂ ಪ್ರಶಸ್ತಿ ಬರಲಿಲ್ಲ. ಆದರೆ ಶಾಸಕರ ಕ್ರೀಡಾಕೂಟದಲ್ಲಿ ಸಿಕ್ಕಾಪಟ್ಟೆ ಪ್ರಶಸ್ತಿ ಬಂತು ಎಂದು ಸ್ಮರಿಸಿದರು.
 
ಕ್ರೀಡೆಯಲ್ಲಿ ಸಣ್ಣ ಪುಟ್ಟ ದೇಶಗಳೆಲ್ಲಾ ಬಹಳ‌ ಮುಂದಿವೆ. ಆದರೆ, ಭಾರತದಂತಹ ದೊಡ್ಡ ದೇಶಕ್ಕೆ ಒಲಂಪಿಕ್ ನಲ್ಲಿ ಒಂದೂ ಚಿನ್ನ ಬರಲಿಲ್ಲ ಎನ್ನುವುದು  ಬೇಸರದ ಸಂಗತಿ ಎಂದರು. 
 
ಹೀಗಾಗಿ ನಾನು ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಇರುವ ಎಲ್ಲಾ ಅನುಕೂಲ ಕಲ್ಪಿಸಿಕೊಡಲು ನಾನು ಸಿದ್ಧ. ರಾಜ್ಯದ ಪಟುಗಳು ದೇಶಕ್ಕೆ ಒಲಂಪಿಕ್ಸ್  ನಲ್ಲಿ ಚಿನ್ನ ತರಲಿ ಎಂದು ಆಶಿಸಿದರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments