Select Your Language

Notifications

webdunia
webdunia
webdunia
webdunia

ಆದ್ಯತೆ ಮೇರೆಗೆ ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

Siddaramaiah

Krishnaveni K

ಬೆಂಗಳೂರು , ಗುರುವಾರ, 4 ಜುಲೈ 2024 (10:44 IST)
ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಕೃಷ್ಣಾದಲ್ಲಿ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
 
ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್‌ ಗಾಂಧಿ ವಸತಿ ನಿಗಮ ಅಡಿಯಲ್ಲಿ47800 ಮನೆಗಳು ಒಟ್ಟು 1.30 ಲಕ್ಷ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು. 
 
ಪ್ರತಿ ಮನೆಯ ನಿರ್ಮಾಣದ ಘಟಕ ವೆಚ್ಚ 6 ರಿಂದ 7.5 ಲಕ್ಷಗಳಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನವನ್ನು ಹೊರತುಪಡಿಸಿ, ಬಾಕಿ ಸುಮಾರು 4 ರಿಂದ 5 ಲಕ್ಷ ರೂಪಾಯಿಗಳ ವಂತಿಕೆ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗಿತ್ತು. ಈ ಮೊತ್ತವನ್ನು ಆರ್ಥಿಕವಾಗಿ ಆಶಕ್ತರಾಗಿರುವ ಕೊಳಗೇರಿ ನಿವಾಸಿಗಳು ಪಾವತಿಸಲು ಕಷ್ಟಕರವಾಗಿ ಮನೆಗಳ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದವು. ಆದುದರಿಂದ, ಫಲಾನುಭವಿಗಳ ಮೇಲಿನ ವಂತಿಕೆ ಹೊರೆಯನ್ನು ಕಡಿಮೆ ಮಾಡಿ, ಒಂದು ಲಕ್ಷಕ್ಕೆ ನಿಗಧಿಗೊಳಿಸಿ, ಪ್ರತಿ ಫಲಾನುಭವಿಗೆ ಬಾಕಿ ರೂ.4.00 ಲಕ್ಷಗಳಂತೆ ಸರ್ಕಾರದಿಂದಲೇ ಭರಿಸಲು ಅನುಮೋದನೆ ನೀಡಲಾಗಿದ್ದು, ಪ್ರಥಮ ಹಂತದಲ್ಲಿ ರೂ. ೫೦೦ಕೋಟಿ ಮಂಜೂರು ಮಾಡಲಾಗಿದೆ. ಹೆಚ್ಚುವರಿ ಅನುದಾನ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
 
ಫಲಾನುಭವಿಗಳ ಪಾಲಿನ ಒಂದು ಲಕ್ಷ ರೂ. ವಂತಿಕೆ ಮೊತ್ತವನ್ನು ಸಂಗ್ರಹಿಸುವ ಮೂಲಕ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಸೂಚಿಸಿದರು.
 
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 592 ಕೊಳೆಗೇರಿಗಳ ಅಭಿವೃದ್ಧಿಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
 
ಕರ್ನಾಟಕ ಗೃಹ ಮಂಡಳಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳಬಹುದು. ಆದರೆ 50:50  ಅನುಪಾತದ ಹಂಚಿಕೆ ಆಧಾರದಲ್ಲಿ ಜಮೀನು ಪಡೆದುಕೊಂಡರೆ, ರೈತರಿಗೆ ಮರುಹಂಚಿಕೆ ಮಾಡುವ ಭೂಮಿಯ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದ್ದು,ಈ ಬಗ್ಗೆ ನೋಂದಣಿ ಮತ್ತು ಮುದ್ರಾಂಕ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 
 
 

Share this Story:

Follow Webdunia kannada

ಮುಂದಿನ ಸುದ್ದಿ

ಅಗ್ನಿವೀರ್ ಯೋಧನ ಕುಟುಂಬಕ್ಕೆ ಪರಿಹಾರ ಕೊಟ್ಟಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದು ಸುಳ್ಳು