Select Your Language

Notifications

webdunia
webdunia
webdunia
webdunia

ಕನಕದಾಸ ಜಯಂತಿಯಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಸೋಮವಾರ, 18 ನವೆಂಬರ್ 2024 (12:37 IST)
ಬೆಂಗಳೂರು: ಕನಕದಾಸರು  ಸಂತರಷ್ಟೇ ಅಲ್ಲದೇ ದಾರ್ಶನಿಕರೂ, ಸಮಾಜ ಸುಧಾರಕರೂ ಆಗಿದ್ದರು. ವಿಶ್ವಮಾನವರೂ ಆಗಿದ್ದ ಅವರ ಜಯಂತ್ಯೋತ್ಸವವನ್ನು ಸರ್ಕಾರದ ವತಿಯಿಂದ  ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಇಂದು ಕನಕದಾಸ ಜಯಂತಿ ಅಂಗವಾಗಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
 
ಭಕ್ತ ಕನಕದಾಸ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಜನಿಸಿದರು. ಕಾಗಿನೆಲೆ ಅವರ ಕರ್ಮಭೂಮಿ. ಕಾವ್ಯ, ಕೀರ್ತನೆಗಳನ್ನು ರಚನೆ ಮಾಡಿದ್ದರು ಎಂದು ವಿವರಿಸಿ  ನಾಡಿನ ಎಲ್ಲಾ ಜನರಿಗೂ ಕನಕ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಶಾಸಕರು ಮತ್ತು ಮುಖಂಡರು ಉಪಸ್ಥಿತರಿದ್ದರು

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ದಿನ ಮೂವರು ಬಾಣಂತಿಯರು ಸಾವನ್ನಪ್ಪಿದರೂ ಬಳ್ಳಾರಿಗೆ ತಲೆಯೂ ಹಾಕದ ಜಮೀರ್ ಅಹ್ಮದ್