Select Your Language

Notifications

webdunia
webdunia
webdunia
webdunia

ಡಿಕೆಶಿಗೆ ವೆಲ್ ಕಮ್ ಮಾಡದ ಸಿಎಂ ವಿವಾದ: ಇದೆಲ್ಲಾ ಬಿಜೆಪಿಯವರೇ ಮಾಡಿದ್ದು ಎಂದು ಸಿದ್ದರಾಮಯ್ಯ

Siddaramaiah-DK Shivakumar

Krishnaveni K

ಬೆಂಗಳೂರು , ಸೋಮವಾರ, 21 ಜುಲೈ 2025 (09:48 IST)
ಬೆಂಗಳೂರು: ಮೈಸೂರಿನ ಸಾಧನಾ ಸಮಾವೇಶದಲ್ಲಿ ವೇದಿಕೆಯಿಂದ ಡಿಕೆ ಶಿವಕುಮಾರ್ ಅರ್ಧಕ್ಕೇ ಎದ್ದು ಹೋದ ನಂತರ ಅವರಿಗೆ ಮನೆಲಿರೋರವರಿಗೆಲ್ಲಾ ವೆಲ್ ಕಂ ಮಾಡಕ್ಕಾಲ್ಲಾರೀ ಎಂದು ಸಿದ್ದರಾಮಯ್ಯ ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ಇದರ ಬಗ್ಗೆ ಈಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಇದಕ್ಕೆಲ್ಲಾ ಬಿಜೆಪಿಯವರೇ ಕಾರಣ ಎಂದಿದೆ.

ವೆಲ್ ಕಮ್ ವಿಚಾರ ವಿವಾದವಾಗುತ್ತಿದ್ದಂತೇ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ‘ಮೈಸೂರಿನಲ್ಲಿ ಸರ್ಕಾರದ ವತಿಯಿಂದ ಸಮಾವೇಶ ಆಯೋಜಿಸಲಾಗಿತ್ತು. ಇಂತಹ ಸಂದರ್ಭಗಳಲ್ಲಿ ಕಾರ್ಯಕ್ರಮದಲ್ಲಿ ಹಾಜರಿರುವವರಿಗೆ ಸ್ವಾಗತ ಕೋರುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ನಾನು ಸಹಜವಾಗಿ ತೆಗೆದುಕೊಳ್ಳಲಿಲ್ಲ. ಇದರಲ್ಲಿ ಅವಮಾನ ಮಾಡುವ ಪ್ರಶ್ನೆ ಎಲ್ಲಿದೆ? ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ನನ್ನ ಹಾಗೂ ಡಿ ಕೆ ಶಿವಕುಮಾರ್ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ಅವರು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗಿದ್ದು, ಅದು ಸದಾ ಭ್ರಮೆಯಾಗಿಯೇ ಇರಲಿದೆ. ನಮ್ಮ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು. ಇದು ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ. ಬಿಜೆಪಿಯವರು ಗ್ಯಾರಂಟಿ ವಿರೋಧಿಸುವ ಮಾತುಗಳನ್ನಾಡುತ್ತಲೇ, ನಮ್ಮ ಗ್ಯಾರಂಟಿ ಯೋಜನೆಗಳನ್ನೇ ಅನುಕರಿಸುತ್ತಿದ್ದಾರೆ. ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ಧರಿದ್ದೇವೆ’ ಎಂದಿದ್ದಾರೆ.

ಆದರೆ ಅವರ ಈ ಪ್ರತಿಕ್ರಿಯೆಗೆ ಸಾಕಷ್ಟು ಕಾಮೆಂಟ್ ಮಾಡಿದ್ದು, ನೀವೇ ನೀಡಿದ ಹೇಳಿಕೆಯಿಂದಾದ ವಿವಾದಕ್ಕೆ ನಮ್ಮನ್ನು ಯಾಕೆ ಎಳೆದು ತರುತ್ತೀರಿ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಅನೇಕ ನೆಟ್ಟಿಗರೂ ಇದೇ ರೀತಿಯ ಕಾಮೆಂಟ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಈ ವಾರವೂ ರಣ ಮಳೆ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ