ಚುನಾವಣೆ ಬಳಿಕ ಒಂದೇ ವೇದಿಕೆಯಲ್ಲಿ ಬಿಎಸ್ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ

Krishnaveni K
ಶನಿವಾರ, 11 ಮೇ 2024 (14:11 IST)
ಮೈಸೂರು: ಚುನಾವಣೆ ವೇಳೆ ಆರೋಪ ಪ್ರತ್ಯಾರೋಪ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕ, ಮಾಜಿ ಸಿಎಂ ಯಡಿಯೂರಪ್ಪ ಇಂದು ಒಂದೇ ವೇದಿಕೆಯಲ್ಲಿ ಒಟ್ಟಿಗೇ ಕಾಣಿಸಿಕೊಂಡಿದ್ದಾರೆ.
 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ನಡೆದ ರಾಜಕೀಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ‌ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಕೂಡಾ ಆಗಮಿಸಿದ್ದರು. ಇಬ್ಬರೂ ಅಕ್ಕಪಕ್ಕ ಕುಳಿತು ಮಾತನಾಡುತ್ತಿದ್ದು ಎಲ್ಲರ ಗಮನ ಸೆಳೆಯಿತು. ಚುನಾವಣೆಯಲ್ಲಿ ನಾಯಕರ ನಡುವೆ ಏನೇ ವಾಗ್ವಾದ ನಡೆದರೂ ವೈಯಕ್ತಿಕವಾಗಿ ಇಬ್ಬರೂ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ.
 
ಈ ಮೊದಲು ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾಗ ಬಿಎಸ್ ವೈ ಸೇರಿದಂತೆ ಬಿಜೆಪಿ ನಾಯಕರು ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದ್ದರು. ಇಂದು ತಮ್ಮ ರಾಜಕೀಯ ವೈರುಧ್ಯ ಮರೆತು ಅಗಲಿದ ಸಂಸದ ಶ್ರೀನಿವಾಸ್ ಪ್ರಸಾದ್ ಗಾಗಿ ಇಬ್ಬರೂ ನಾಯಕರು  ವೇದಿಕೆ ಹಂಚಿಕೊಂಡಿದ್ದಾರೆ. ಭೌದ್ಧ ಧರ್ಮಗುರು ಬಂತೇಜಿ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಭಾಗ್ಯಲಕ್ಷ್ಮಿ ಶ್ರೀನಿವಾಸ್ ಪ್ರಸಾದ್, ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments