ಸರ್ಕಾರಕ್ಕೆ ಮುಜುಗರ ತಂದಿಟ್ಟ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಬುಲಾವ್

Krishnaveni K
ಸೋಮವಾರ, 23 ಜೂನ್ 2025 (12:11 IST)
Photo Credit: Instagram
ಬೆಂಗಳೂರು: ಸರ್ಕಾರದ ವಿರುದ್ಧವೇ ಭ್ರಷ್ಟಾಚಾರದ ಆರೋಪ ಹೊರಿಸಿ ಮುಜುಗರ ತಂದಿಟ್ಟಿರುವ ಹಿರಿಯ ಶಾಸಕ ಬಿಆರ್ ಪಾಟೀಲ್ ಗೆ ಈಗ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ದಾರೆ.

ವಸತಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಶಾಸಕ ಬಿಆರ್ ಪಾಟೀಲ್ ಅವರ ಅಡಿಯೋ ವೈರಲ್ ಆಗಿತ್ತು. ಇದೀಗ ವಿಪಕ್ಷ ಬಿಜೆಪಿಗೆ ಒಳ್ಳೆಯ ಅಸ್ತ್ರವಾಗಿ ಪರಿಣಮಿಸಿದೆ. ಇದನ್ನೇ ಮುಂದಿಟ್ಟುಕೊಂಡು ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೂ ಒತ್ತಾಯಿಸುತ್ತಿದೆ.

ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣ ಬಳಿಕ ಈಗ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಹಗರಣ ಆರೋಪ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದೂ ಕಾಂಗ್ರೆಸ್ ಶಾಸಕರೇ ಆರೋಪ ಮಾಡಿರುವುದರಿಂದ ಪಕ್ಷ ಮತ್ತು ಸರ್ಕಾರ ಮುಜುಗರಕ್ಕೀಡಾಗಿದೆ.

ಈ ಹಿನ್ನಲೆಯಲ್ಲಿ ಬಿಆರ್ ಪಾಟೀಲ್ ಗೆ ಖುದ್ದಿ ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಬೆಂಗಳೂರಿನಲ್ಲಿ ಭೇಟಿಯಾಗಲು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಭೇಟಿ ಬಳಿಕ ಬಿಆರ್ ಪಾಟೀಲ್ ನಿಲುವು ಏನಿರುತ್ತದೆ ಎಂಬುದು ಈಗ ಕುತೂಹಲಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments