Webdunia - Bharat's app for daily news and videos

Install App

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

Krishnaveni K
ಭಾನುವಾರ, 27 ಏಪ್ರಿಲ್ 2025 (13:22 IST)
ಬೆಂಗಳೂರು: ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯರ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಪಾಕಿಸ್ತಾನದ ಜೊತೆ ಯುದ್ಧ ಮಾಡಬೇಕಾ ಎಂಬ ಪ್ರಶ್ನೆಗೆ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದಿದ್ದಾರೆ.

ನಿನ್ನೆ ಮಾಧ್ಯಮಗಳು ಪಾಕಿಸ್ತಾನ ಜೊತೆ ಯುದ್ಧ ಮಾಡಬೇಕಾ ಎಂದು ಕೇಳಿದಾಗ ಯುದ್ಧ ಬೇಕಾಗಿಲ್ಲ. ನಾವು ಶಾಂತಿ ಪ್ರಿಯರು. ರಾಜತಾಂತ್ರಿಕವಾಗಿ ಕ್ರಮ ಕೈಗೊಳ್ಳಲಿ. ಭದ್ರತೆ ಹೆಚ್ಚಿಸಲಿ ಎಂದಿದ್ದರು. ಅವರ ಹೇಳಿಕೆ ಪಾಕಿಸ್ತಾನ ಮಾಧ್ಯಮಗಳಲ್ಲೂ ಪ್ರಸಾರವಾಗಿತ್ತು.

ಸಿದ್ದರಾಮಯ್ಯ ಯುದ್ಧ ಬೇಡ ಎಂದು ಹೇಳಿಕೆ ನೀಡಿದ್ದನ್ನು ಬಿಜೆಪಿ ನಾಯಕರು ಖಂಡಿಸಿದ್ದರು. ದೇಶವೇ ಆಕ್ರೋಶದಲ್ಲಿರುವಾಗ ಸಿದ್ದರಾಮಯ್ಯ ಮಾತ್ರ ಪಾಕಿಸ್ತಾನ ಮುಸ್ಲಿಮರನ್ನೂ ಓಲೈಸಲು ಮುಂದಾಗಿದ್ದಾರೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದರು.

ತಮ್ಮ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಂತೇ ಇದೀಗ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ‘ಯುದ್ಧ ಬೇಡ ಅಂತ ಹೇಳಿಲ್ಲ. ಅನಿವಾರ್ಯವಾದರೆ ಯುದ್ಧ ಮಾಡಲಿ. ಇಲ್ಲವೇ ಶಾಂತಿ ಮಾರ್ಗದಲ್ಲಿ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದೆನಷ್ಟೇ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments