Select Your Language

Notifications

webdunia
webdunia
webdunia
webdunia

ಸುಕ್ರಜ್ಜಿ ಹುಟ್ಟು ಕಲಾವಿದೆ, ನನಗೆ ನೋವಾಗಿದೆ: ಸಿಎಂ ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಗುರುವಾರ, 13 ಫೆಬ್ರವರಿ 2025 (10:40 IST)
ಬೆಂಗಳೂರು: ಜನಪದ ಹಾಡುಗಾರ್ತಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಅವರು ಹುಟ್ಟು ಕಲಾವಿದೆ, ನನಗೆ ತೀವ್ರ ನೋವಾಗಿದೆ ಎಂದಿದ್ದಾರೆ.

ವಯೋಸಹಜ ಖಾಯಿಲೆಯಿಂದಾಗಿ ಇಂದು ಮುಂಜಾನೆ 3.30 ರ ಸುಮಾರಿಗೆ ಸುಕ್ರಜ್ಜಿ ಇಹಲೋಕ ತ್ಯಜಿಸಿದ್ದರು. ಅವರ ನಿಧನಕ್ಕೆ ಎಲ್ಲೆಡೆಯಿಂದ ಸಂತಾಪ ವ್ಯಕ್ತವಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಕೂಡಾ ಶೋಕ ಸಂದೇಶ ಪ್ರಕಟಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ.

ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ "ಸುಕ್ರಜ್ಜಿ'' ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು.

ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದು:ಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೊ ಪ್ರಯಾಣ ದರದ ಬಗ್ಗೆ ಕೊನೆಗೂ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ