Select Your Language

Notifications

webdunia
webdunia
webdunia
webdunia

ಎಸ್ಎಸ್ಎಲ್ ಸಿ ಟಾಪರ್ ಗಳನ್ನು ಮನೆಗೆ ಕರೆಸಿ ನಗದು ಬಹುಮಾನ ಕೊಟ್ಟ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

SSLC toppers

Krishnaveni K

ಬೆಂಗಳೂರು , ಬುಧವಾರ, 15 ಮೇ 2024 (09:22 IST)
ಬೆಂಗಳೂರು: SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ Rank  ಪಡೆದ ಮಂಡ್ಯ ತಾಲೂಕಿನ 
ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ  ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸನ್ಮಾನಿಸಿದರು. 
 
ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.‌ ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ವುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು. 
 
ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು.
 
ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯತೆ ಅರ್ಪಿಸಿದರು. 
 
ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994 ರಲ್ಲಿ  ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಇಬ್ಬರೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿದ್ದಾರೆ. ತಮ್ಮ ನಿವಾಸಕ್ಕೆ ಕರೆಸಿಕೊಂಡು ಅಂಕಿತಾ ಮತ್ತು ನವನೀತ್ ಗೆ ಕ್ರಮವಾಗಿ 5 ಮತ್ತು 2 ಲಕ್ಷ ರೂ. ನೀಡಿ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಈ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ: ಕರ್ನಾಟಕದ ಮುಂದಿನ ಒಂದು ವಾರದ ಹವಾಮಾನ ವರದಿ