Publish Date: Fri, 19 Dec 2025 (10:03 IST)
Updated Date: Fri, 19 Dec 2025 (10:05 IST)
ಬೆಳಗಾವಿ: ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯ ನಿನ್ನೆ ಡಿನ್ನರ್ ಮೀಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಆಂಡ್ ಟೀಂ ಮಹತ್ವದ ತೀರ್ಮಾನ ಮಾಡಿದೆ.
ಮೊನ್ನೆಯಷ್ಟೇ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯದಿಂದ ಸಿಎಂ ಸದನಕ್ಕೇ ಹಾಜರಾಗಿರಲಿಲ್ಲ. ಹಾಗಿದ್ದರೂ ಬೆಳಗಾವಿಯಲ್ಲೇ ಇದ್ದ ಅವರು ನಿನ್ನೆ ರಾತ್ರಿ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಈ ಔತಣಕೂಟಕ್ಕೆ ಡಿಕೆ ಶಿವಕುಮಾರ್ ಗೆ ಆಹ್ವಾನವಿರಲಿಲ್ಲ.
ಆದರೆ ಡಾ ಜಿ ಪರಮೇಶ್ವರ್ ಸೇರಿದಂತೆ ಸಿದ್ದು ಬಣದ ನಾಯಕರು ಪಾಲ್ಗೊಂಡಿದ್ದಾರೆ. ಡಿನ್ನರ್ ಮೀಟಿಂಗ್ ವೇಳೆ ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ಬಿಟ್ಟುಕೊಡದಂತೆ ಬೆಂಬಲಿಗ ನಾಯಕರು ಪಟ್ಟು ಹಿಡಿದಿದ್ದಾರೆ. ಇನ್ನು ಸಿದ್ದರಾಮಯ್ಯ ಕೂಡಾ ಇದೇ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಸಿಎಂ ಸ್ಥಾನ ಬಿಟ್ಟುಕೊಟ್ಟರೆ ಅಹಿಂದ ಮತ ಕಳೆದುಕೊಳ್ಳಬೇಕಾಗುತ್ತದೆ. ಇನ್ನು ಡಿಕೆಶಿ ಬಳಿಯಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ತಮ್ಮ ತೆಕ್ಕೆಗೆ ಸೆಳೆದುಕೊಳ್ಳಲು ರಣತಂತ್ರ ಮಾಡಿದ್ದಾರೆ ಎನ್ನಲಾಗಿದೆ.