ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುಚಿಕು ಕ್ಷಣ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ಇಬ್ಬರೂ ಕಂಡಿದ್ದು ಹೀಗೆ

Krishnaveni K
ಸೋಮವಾರ, 8 ಜುಲೈ 2024 (12:19 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಇಂದು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಪರಸ್ಪರ ಆತ್ಮೀಯರಾಗಿ ಕಂಡುಬಂದರು.

ರಾಜ್ಯದಲ್ಲಿ ಡೆಂಗ್ಯೂ, ಜೀಕಾ ವೈರಸ್, ಮಲೇರಿಯಾ ಸೇರಿದಂತೆ ಜ್ವರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ಮತ್ತು ಡಿಸಿಎಂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

ಈ ವೇಳೆ ಇಬ್ಬರೂ ನಾಯಕರು ಪರಸ್ಪರ ಆತ್ಮೀಯವಾಗಿ ಕಾಲ ಕಳೆದಿದ್ದಾರೆ. ಸಿಎಂ ಕುರ್ಚಿಗಾಗಿ ಇಬ್ಬರ ನಡುವೆ ಫೈಟ್ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಇಬ್ಬರೂ ಈ ರೀತಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಈ ಮೂಲಕ ತಾವಿಬ್ಬರೂ ಒಂದಾಗಿದ್ದೇವೆ ಎಂದು ಸಂದೇಶ ಸಾರಿದಂತಾಗಿದೆ.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments