ರಂಜಾನ್ ಹಬ್ಬಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Krishnaveni K
ಗುರುವಾರ, 11 ಏಪ್ರಿಲ್ 2024 (10:54 IST)
ಬೆಂಗಳೂರು: ಇಂದು ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬ ಆಚರಿಸಲಾಗುತ್ತಿದೆ. ನಿನ್ನೆ ರಾತ್ರಿ ಚಂದ್ರ ದರ್ಶನವಾಗಿದ್ದು, ಇಂದು ರಂಜಾನ್ ಹಬ್ಬ ಆಚರಿಸಲಾಗುತ್ತಿದೆ.

ರಂಜಾನ್ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಮೂಲಕ ಶುಭ ಕೋರಿದ್ದಾರೆ. ‘ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನಲ್ಲಿ ಸುಖ, ಶಾಂತಿ ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದುಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು’ ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ಶುಭ ಕೋರಿದ್ದು, ‘ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ, ಪ್ರೀತಿ, ಸೌಹಾರ್ದತೆಯ ಸಂಕೇತವಾದ ಈ ಹಬ್ಬವು ಎಲ್ಲರಿಗೂ ಸುಖ, ಶಾಂತಿ ಕರುಣಿಸಲಿ’ ಎಂದಿದ್ದಾರೆ.

ಇದಲ್ಲದೆ ಇಂದು ನಂದಿ ದುರ್ಗ ರಸ್ತೆಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರೊಂದಿಗೆ ರಂಜಾನ್ ಪ್ರಾರ್ಥನೆಯಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments