Publish Date: Thu, 26 Sep 2024 (15:23 IST)
Updated Date: Thu, 26 Sep 2024 (15:26 IST)
ಬೆಂಗಳೂರು: ಗ್ರಾಮೀಣ ಪತ್ರಕರ್ತರ ಬಹುದಿನಗಳ ಬೇಡಿಕೆಯಾದ ಉಚಿತ ಬಸ್ ಪಾಸ್ ಗೆ ಇಂದು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದು, ಕೊನೆಗೂ ಬೇಡಿಕೆ ಈಡೇರಿದೆ.
ಗ್ರಾಮೀಣ ಭಾಗದ ಪತ್ರಕರ್ತರಿಗೆ ತಮ್ಮ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಹಲವು ದಿನಗಳಿಂದ ಒತ್ತಾಯ ಕೇಳಿಬರುತ್ತಲೇ ಇತ್ತು. ಅದನ್ನೀಗ ಮುಖ್ಯಮಂತ್ರಿಗಳು ಕೊನೆಗೂ ಈಡೇರಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ.
ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ. ತಮ್ಮ ಬಹುದಿನಗಳ ಬೇಡಿಕೆ ಈಡೇರಿದ್ದಕ್ಕೆ ಮಾಧ್ಯಮ ವಲಯದಿಂದಲೂ ಸಿಎಂಗೆ ಧನ್ಯವಾದ ಸಲ್ಲಿಕೆಯಾಗಿದೆ.