Select Your Language

Notifications

webdunia
webdunia
webdunia
webdunia

ಮೆಟ್ರೊ ಪ್ರಯಾಣ ದರದ ಬಗ್ಗೆ ಕೊನೆಗೂ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಗುರುವಾರ, 13 ಫೆಬ್ರವರಿ 2025 (10:31 IST)
ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏಕಾಏಕಿ ದುಪ್ಪಟ್ಟು ಏರಿಕೆಯಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಮೆಟ್ರೊ ದರ ಏರಿಕೆಯಿಂದಾಗಿ ಜನ ಇದೀಗ ತಮ್ಮ ಖಾಸಗಿ ವಾಹನ ಅಥವಾ ಬಿಎಂಟಿಸಿ ಬಸ್ ಗಳ ಮೊರೆ  ಹೋಗುತ್ತಿದ್ದಾರೆ. ವರದಿಗಳ ಪ್ರಕಾರ ಮೆಟ್ರೊ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಬಿಎಂಟಿಸಿ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.

ಇದರ ನಡುವೆ ಈಗ ಸಿಎಂ ಸಿಹಿ ಸುದ್ದಿ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ‘ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಕಾಂಗ್ರೆಸ್ ಶಾಸಕರಿಂದ ಈಗ ಸರ್ಕಾರಿ ಖರ್ಚಿನಲ್ಲಿ ಕುಂಭಮೇಳ ಯಾತ್ರೆ: ಅಧ್ಯಯನ ಪ್ರವಾಸ ನೆಪ