Select Your Language

Notifications

webdunia
webdunia
webdunia
webdunia

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

CM Siddaramaiah

Sampriya

ಮೈಸೂರು , ಬುಧವಾರ, 1 ಅಕ್ಟೋಬರ್ 2025 (18:45 IST)
ಮೈಸೂರು: ಸಿಎಂ ಆಗಿ ಇನ್ನೆರಡೂ ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇಲ್ಲಿ ಬುಧವರಾ ಪತ್ರಕರ್ತರೊಂದಿಗೆ ಮಾತನಾಡಿದ ಅವರು,  ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು. ಹೋಪ್‌ ಸೋ ನಾನು ಮಾಡಬಹುದು. ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಹೇಳಿದರು.

ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ವಿಪಕ್ಷಗಳ ಮಾತಿಗೆ ಪ್ರತಿಕ್ರಿಯಿಸಿದ ಅವರು, ಅವರೆಲ್ಲ 2ನೇ ಬಾರಿ ಸಿಎಂ ಆಗಲ್ಲ ಎಂದಿದ್ದು. ನಾನು ಸಿಎಂ ಆಗಲಿಲ್ವಾ? ಬಹಳ ಜನ ಬಹಳಷ್ಟು ಹೇಳುತ್ತಾರೆ, ಹೇಳಲಿ. ನವೆಂಬರ್‌ನಲ್ಲಿ ಸರ್ಕಾರಕ್ಕೆ ಎರಡು ವರ್ಷ ತುಂಬುವ ಕಾರಣ ಆ ರೀತಿ ಮಾತನಾಡುತ್ತಾರೆ ಎಂದರು.

ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರಬೇಕು. ಬಿಜೆಪಿಗೆ ವಸ್ತು ಸ್ಥಿತಿ ಗೊತ್ತಿಲ್ಲ. ಅವರು ಹೇಳಿದ ಏನು ನಡೆಯುವುದಿಲ್ಲ. ಬಿಜೆಪಿಯವರು ಬಿಜೆಪಿ ಹೇಳಿದ್ದೆಲ್ಲಾ ಸುಳ್ಳಾಗಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ