Webdunia - Bharat's app for daily news and videos

Install App

ಕಲ್ಯಾಣ ಕರ್ನಾಟಕ ಜನತೆಗೆ ಹೊಸ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

Sampriya
ಸೋಮವಾರ, 16 ಸೆಪ್ಟಂಬರ್ 2024 (18:27 IST)
ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ  ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ  ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

371 ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ  371 ಜೆ ಕಾನೂನು ತರಲಾಗಿದ್ದು,, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು.  2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತರು ಬಿಜೆಪಿಯವರಲ್ಲ.  ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದರು.

ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ಅನುದಾನ

ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ  ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ನಾಗಮಂಗಲ ಪ್ರಕರಣ- ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಅಮಾನತ್ತು

ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯವ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್ ಪೆಕ್ಟರ್ ನ್ನು ಅಮಾನತ್ತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟ, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments