Select Your Language

Notifications

webdunia
webdunia
webdunia
webdunia

ಕರ್ನಾಟಕ ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Siddaramaiah

Krishnaveni K

ಬೆಳಗಾವಿ , ಗುರುವಾರ, 26 ಡಿಸೆಂಬರ್ 2024 (10:48 IST)
ಬೆಳಗಾವಿ ಡಿ 26: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.
 
ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.
 
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ  ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.
 
ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು. 
 
ಅಪಘಾತಕ್ಕೀಡಾದ ನಮ್ಮ ನಾಲ್ವರು ಯೋಧರಾದ ದಯಾನಂದ ತಿರುಕಣ್ಣನವರ್ ಬೆಳಗಾವಿ, ಧನರಾಜ್ ಸುಭಾಷ್ ಚಿಕ್ಕೋಡಿ, ಮಹೇಶ್ ನಾಗಪ್ಪ ಬಾಗಲಕೋಟೆ, ಅನೂಪ್ ಪೂಜಾರಿ ಕುಂದಾಪುರ,  ಇವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಅಂತ ಪ್ರಾರ್ಥನೆ ಮಾಡ್ತೀನಿ
 
ಸರ್ಕಾರದಿಂದ ಕುಟುಂಬ ವರ್ಗಕ್ಕೆ ಪರಿಹಾರ ನೀಡಲಾಗುವುದು ಎಂದು ಸಿಎಂ ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ. ಇಂದು ಬೆಳಿಗ್ಗೆ ಹುತಾತ್ಮ ಯೋಧರ ಮೃತದೇಹಗಳು ರಾಜ್ಯಕ್ಕೆ ಬಂದಿದೆ. ಇಂದೇ ಅಂತ್ಯಕ್ರಿಯೆ ನಡೆಯಲಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದ ಮೂವರು ಹುತಾತ್ಮ ಯೋಧರ ಕೌಟುಂಬಿಕ ಹಿನ್ನಲೆ ಕೇಳಿದ್ರೆ ಕಣ್ಣೀರು ತರಿಸುತ್ತದೆ