Select Your Language

Notifications

webdunia
webdunia
webdunia
webdunia

ವಕ್ಫ್ ಆತಂಕದಲ್ಲಿರುವ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್

Siddaramaiah

Krishnaveni K

ಬೆಂಗಳೂರು , ಮಂಗಳವಾರ, 29 ಅಕ್ಟೋಬರ್ 2024 (15:08 IST)
ಬೆಂಗಳೂರು: ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ  ಅವರು ಪ್ರತಿಕ್ರಿಯೆ ನೀಡಿದರು.

ಕಂದಾಯಸಚಿವ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.

ಒಳಮೀಸಲಾತಿ ಜಾರಿ ಪರಾಮರ್ಶೆಗದ ಏಕಸದಸ್ಯ ಆಯೋಗ ರಚನೆ

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದ್ದು, ಒಳಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು. ಈಗಾಗಲೇ ನೇಮಕಾತಿಗೆ ಮಾಡಿರುವ ಅಧಿಸೂಚನೆಗಳನ್ನು ಹೊರತುಪಡಿಸಿ,ಏಕ ಸದಸ್ಯ ಸದಸ್ಯ ಾಯೋಗದ ವರದಿ ಬರುವವರೆಗೆ ಎಲ್ಲ ಸರ್ಕಾರಿ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸುವುದಿಲ್ಲ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಶೋಭಾ ಕರಂದ್ಲಾಜೆ ಪುಟವಿಟ್ಟ ಚಿನ್ನವಿದ್ದಂತೆ: ಭೈರತಿ ಸುರೇಶ್ ವಿರುದ್ಧ ವಿ ಸೋಮಣ್ಣ ಕಿಡಿ