Publish Date: Mon, 18 Sep 2017 (15:24 IST)
Updated Date: Mon, 18 Sep 2017 (15:38 IST)
ಜಾತಿ ಜಾತಿಗಳ ನಡುವೆ ಜಗಳ ಹಚ್ಚುತ್ತಿರುವ ಸಿಎಂ ಸಿದ್ದರಾಮಯ್ಯವರಿಗೆ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಭ್ರಷ್ಟಾಚಾರ ಎಸಗಿದ್ದಾರೆ. ಅವರು ಎಸಗಿದ ಭ್ರಷ್ಟಾಚಾರವನ್ನು ಬಿಜೆಪಿ ಬಹಿರಂಗಪಡಿಸಲಿದೆ ಎಂದು ಗುಡುಗದ್ದಾರೆ.
ಭ್ರಷ್ಟ ಸರಕಾರವನ್ನು ಕಿತ್ತೊಗೆಯುವ ಯೋಗ ಬಂದಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಧೂಳಿಪಟವಾಗಲಿದೆ. ಅದನ್ನು ತಡೆಯುವುದು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಕೇಂದ್ರದಲ್ಲಿರುವ ಪ್ರಧಾನಿ ಮೋದಿ ಸರಕಾರ ಅಲ್ಪಸಂಖ್ಯಾತರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.