Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಯನ್ನು ಹೂಗುಚ್ಛ ನೀಡಿ ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಗೆಹಲೋಟ್

Prime Minister Narendra Modi

Sampriya

ಬೆಂಗಳೂರು , ಭಾನುವಾರ, 10 ಆಗಸ್ಟ್ 2025 (11:07 IST)
ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು ಪ್ರವಾಸದಲ್ಲಿದ್ದು, ಮೇಕ್ರಿ ಸರ್ಕಲ್‌ನ ಎಚ್‌ಕ್ಯುಟಿಸಿ ಹೆಲಿಪ್ಯಾಡ್‌ಗೆ ಬಂದ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. 

ಕೆಎಸ್​ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲುಗಳಿಗೆ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಇದಾದ ಮೇಲೆ ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕೂಡ ಇದೇ ವೇಳೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿಸಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಲಿದ್ದು, ವೇದಿಕೆ ಮೇಲೆ ಮೋದಿ ಜೊತೆ 13 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. 

ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಅವರೊಂದಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್, ಕೇಂದ್ರ ಸಚಿವರಾದ ಮನೋಹರ್‌ ಲಾಲ್‌, ಅಶ್ವಿನಿ ವೈಷ್ಣವ್‌, ಶೋಭಾ ಕರಂದ್ಲಾಜೆ, ಎಚ್‌.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಂಸದ ತೇಜಸ್ವಿ ಸೂರ್ಯ, ಸಂಸದ ಸಿ.ಎನ್‌. ಮಂಜುನಾಥ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಈ ಕಾರ್ಯಕ್ರಮ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು- ಬೆಳಗಾವಿ ವಂದೇ ಭಾರತ್‌ಗೆ ಕೆಲವೇ ಕ್ಷಣಗಳಲ್ಲಿ ಮೋದಿ ಗ್ರೀನ್‌ಸಿಗ್ನಲ್‌: ವೇಳಾಪಟ್ಟಿ ಹೀಗಿದೆ