Publish Date: Fri, 06 Oct 2017 (16:22 IST)
Updated Date: Fri, 06 Oct 2017 (16:24 IST)
ಮೀಸಲಾತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ಜ್ಞಾನವಿಲ್ಲ. ಕಾನೂನು ಕಲಿತಿರುವುದನ್ನು ಕೂಡಾ ಮರೆತಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ.
ಪಟ್ಟಣದಲ್ಲಿ ಆಯೋಜಿಸಲಾದ ನೇಕಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಕಾಮ್ ಕಿ ಬಾತ್ ಮಾತನಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳ ಅಡಳಿತದಲ್ಲಿ ಅವರು ಮಾಡಿದ್ದೇನು? ಎಂದು ತಿರುಗೇಟು ನೀಡಿದರು.
ರೈತರು, ನೇಕಾರರನ್ನು ಸಿಎಂ ಕಡೆಗಣಿಸಿದ್ದಾರೆ. ಕೇವಲ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲವೆಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.