ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕೃಷಿ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ದಲಿತ ಕವಿ ಸಿದ್ದಲಿಂಗಯ್ಯ ಅವರ ಕವಿತೆಯನ್ನು ಉಲ್ಲೇಖಿಸಿ ರೈತರ ಮಹತ್ವವನ್ನು ಪ್ರಶಂಸಿಸಿದ ಸಿಎಂ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ಪಶುಸಂಗೋಪನೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಶ್ರಮಿಸುವುದಾಗಿ ಹೇಳಿದರು.
ರೈತರನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿರುವುಂತೆ ನೋಡಿಕೊಳ್ಳುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯ ಎಂದು ನುಡಿದ ಸಿಎಂ ಸಿದ್ದರಾಮಯ್ಯ ಕೃಷಿ ಕ್ಷೇತ್ರಕ್ಕೆ ನೀಡಿರುವ ಅಂಶಗಳು ಹೀಗಿವೆ..
• ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುವಂತೆ ಮಾಡಲು ಮಾರುಕಟ್ಟೆಯೊಡನೆ ಸಂಪರ್ಕ
•
ಕೃಷಿ ಪದ್ದತಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಪಶುಪಾಲನೆ,
• ಮಣ್ಣಿನ ಗುಣ ಹಾಗೂ ಮಾರುಕಟ್ಟೆಯ ಬೇಡಿಕೆಯನ್ನು ಅವಲಂಬಿಸಿ ರೈತರಿಗೆ ಯಾವ ಬೆಳೆ ಬೆಳೆಯಬೇಕೆನ್ನುವ ಬಗ್ಗೆ ಮಾರ್ಗದರ್ಶನ ನೀಡಲು ಕ್ರಮ
•
ಮಣ್ಣಿನ ಗುಣಮಟ್ಟ ಮತ್ತು ಪರೀಕ್ಷೆ ಬಗ್ಗೆ ರೈತರಿಗೆ ಮಾಹಿತಿ ನೀಡುವುದು. ಹೊಸ ಮಾದರಿಯ ಕೃಷಿ ಬಗ್ಗೆ ರೈತರಲ್ಲಿ ಅರಿವು ಮತ್ತು ತರಬೇತಿ. ಬೆಳೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಬಗ್ಗೆ ರೈತರಿಗೆ ಮಾಹಿತಿ.
• ಕೃಷಿ ಭಾಗ್ಯ ಯೋಜನೆಯ ಮರುಜಾರಿಗೊಳಿಸಲು 200 ಕೋಟಿ ರೂ. ಅನುದಾನ
• ನಶಿಸಿಹೋಗುತ್ತಿರುವ ತಳಿಯ ಬೆಳೆಗಳನ್ನು ಸಂರಕ್ಷಿಸಲು ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ
• ಸಂಸ್ಕರಿತ ಸಿರಿಧಾನ್ಯ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳಿಗಾಗಿ ಹೊಸ ಯೋಜನೆ
• ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳ ಸುಸ್ಥಿರ ಅಭಿವೃದ್ಧಿಗಾಗಿ ವರ್ಷಕ್ಕೆ 1 ಸಾವಿರ ಕೋಟಿ ರೂ. ಗಳಂತೆ 5 ಸಾವಿರ ಕೋಟಿ ರೂ. ಮೀಸಲು
• ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ಕೃಷಿ ಕೇಂದ್ರದ ಅಭಿವೃದ್ದಿ