Webdunia - Bharat's app for daily news and videos

Install App

ಕೃಷಿ ಕ್ಷೇತ್ರಕ್ಕೆ ಬಂಪರ್‌ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ

geetha
ಶುಕ್ರವಾರ, 16 ಫೆಬ್ರವರಿ 2024 (15:00 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕೃಷಿ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ.  ದಲಿತ ಕವಿ ಸಿದ್ದಲಿಂಗಯ್ಯ ಅವರ ಕವಿತೆಯನ್ನು ಉಲ್ಲೇಖಿಸಿ ರೈತರ ಮಹತ್ವವನ್ನು ಪ್ರಶಂಸಿಸಿದ ಸಿಎಂ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ಪಶುಸಂಗೋಪನೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಶ್ರಮಿಸುವುದಾಗಿ ಹೇಳಿದರು. 
 
ರೈತರನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿರುವುಂತೆ ನೋಡಿಕೊಳ್ಳುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯ ಎಂದು ನುಡಿದ ಸಿಎಂ ಸಿದ್ದರಾಮಯ್ಯ ಕೃಷಿ ಕ್ಷೇತ್ರಕ್ಕೆ ನೀಡಿರುವ ಅಂಶಗಳು ಹೀಗಿವೆ..
 
ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುವಂತೆ ಮಾಡಲು ಮಾರುಕಟ್ಟೆಯೊಡನೆ ಸಂಪರ್ಕ
ಕೃಷಿ ಪದ್ದತಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಪಶುಪಾಲನೆ, 
ಮಣ್ಣಿನ ಗುಣ ಹಾಗೂ ಮಾರುಕಟ್ಟೆಯ ಬೇಡಿಕೆಯನ್ನು ಅವಲಂಬಿಸಿ ರೈತರಿಗೆ ಯಾವ ಬೆಳೆ ಬೆಳೆಯಬೇಕೆನ್ನುವ ಬಗ್ಗೆ ಮಾರ್ಗದರ್ಶನ ನೀಡಲು ಕ್ರಮ
ಮಣ್ಣಿನ ಗುಣಮಟ್ಟ ಮತ್ತು ಪರೀಕ್ಷೆ ಬಗ್ಗೆ ರೈತರಿಗೆ ಮಾಹಿತಿ ನೀಡುವುದು. ಹೊಸ ಮಾದರಿಯ ಕೃಷಿ ಬಗ್ಗೆ ರೈತರಲ್ಲಿ ಅರಿವು  ಮತ್ತು ತರಬೇತಿ. ಬೆಳೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಬಗ್ಗೆ ರೈತರಿಗೆ ಮಾಹಿತಿ. 
ಕೃಷಿ ಭಾಗ್ಯ ಯೋಜನೆಯ ಮರುಜಾರಿಗೊಳಿಸಲು 200 ಕೋಟಿ ರೂ. ಅನುದಾನ
ನಶಿಸಿಹೋಗುತ್ತಿರುವ ತಳಿಯ ಬೆಳೆಗಳನ್ನು ಸಂರಕ್ಷಿಸಲು ಸಮುದಾಯ ಬೀಜ ಬ್ಯಾಂಕ್‌ ಸ್ಥಾಪನೆ
ಸಂಸ್ಕರಿತ ಸಿರಿಧಾನ್ಯ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳಿಗಾಗಿ ಹೊಸ ಯೋಜನೆ
ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳ ಸುಸ್ಥಿರ ಅಭಿವೃದ್ಧಿಗಾಗಿ ವರ್ಷಕ್ಕೆ 1 ಸಾವಿರ ಕೋಟಿ ರೂ. ಗಳಂತೆ 5 ಸಾವಿರ ಕೋಟಿ ರೂ. ಮೀಸಲು
ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ಕೃಷಿ ಕೇಂದ್ರದ ಅಭಿವೃದ್ದಿ 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments