Webdunia - Bharat's app for daily news and videos

Install App

ಹೈಕೋರ್ಟ್ ತೀರ್ಪು ಬೆನ್ನಲ್ಲೇ ಆಪರೇಷನ್ ಕಮಲದ ಬಗ್ಗೆ ಬಾಯ್ಬಿಟ್ಟ ಸಿಎಂ ಸಿದ್ಧರಾಮಯ್ಯ

Sampriya
ಮಂಗಳವಾರ, 24 ಸೆಪ್ಟಂಬರ್ 2024 (20:04 IST)
ಬೆಂಗಳೂರು:  ಬಿಜೆಪಿ ಹಾಗೂ ಜೆಡಿಎಸ್ ನವರು ಒಮ್ಮೆಯೂ ರಾಜ್ಯದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಬಿಜೆಪಿ ಈ ಹಿಂದೆ ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ಹಗರಣ ಬಗ್ಗೆ ಹೈಕೋರ್ಟ್ ತೀರ್ಪು ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೇವೆ ಹಾಗಾಗಿ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಾಡಿದ್ದರು, ಆದರೆ ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ ಅವರ ಪ್ರಯತ್ನ ವಿಫಲವಾಯಿತು.

ನಮ್ಮ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ನಾಯಕರು ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು  ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಲ್ಲಿ ರೋಡ್‌ಶೋನಲ್ಲಿ ಮೋದಿಗೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಕರ್ನಲ್‌ ಸೋಫಿಯಾ ಕುಟುಂಬಸ್ಥರು

Mandya Accident: ಸಂಚಾರಿ ಪೊಲೀಸರ ಯಡವಟ್ಟಿನಿಂದ ಮಂಡ್ಯದಲ್ಲಿ ಮೂರು ವರ್ಷದ ಬಾಲಕಿ ಸಾವು

ಉಕ್ರೇನ್‌ ಮೇಲೆ ರಷ್ಯಾ ಡ್ರೋನ್ ದಾಳಿ ಬೆನ್ನಲ್ಲೇ ಕೆರಳಿ ಕೆಂಡವಾದ ಟ್ರಂಪ್‌: ಪುಟಿನ್ ಹುಚ್ಚ ಎಂದ ಅಮೆರಿಕ ಅಧ್ಯಕ್ಷ

Covid: ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್

Dinesh gundu rao: ಲಾಕ್ ಡೌನ್ ಮಾಡೋದು ನಿಮಗಿಷ್ಟಾನಾ, ನಾಳೆನೇ ಅನೌನ್ಸ್ ಮಾಡ್ತೀನಿ

ಮುಂದಿನ ಸುದ್ದಿ
Show comments