Publish Date: Fri, 24 Apr 2026 (10:11 IST)
Updated Date: Fri, 24 Apr 2026 (10:18 IST)
ಸಿಎಂ ಸಿದ್ದರಾಮಯ್ಯನವರು ಗುರುವಾರ ರಾತ್ರಿ ಆಪ್ತರ ಜತೆ ಔತಣಕೂಟದಲ್ಲಿ ಭಾಗಿಯಾಗಿ, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆಂಬ ಚರ್ಚೆ ರಾಜಕೀಯ ವಲಯದಲ್ಲಿದೆ.
ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪ್ರಭಾವಿ ಸಚಿವರೊಬ್ಬರಿಗೆ ಸೇರಿದ ವಸತಿಸಂಕೀರ್ಣದಲ್ಲಿ ಸಭೆ ನಡೆಸಿರುವ ಸಿದ್ದರಾಮಯ್ಯ ಅವರು ಮುಂದಿನ ಕಾರ್ಯತಂತ್ರಗಳ ಕುರಿತು ಬಗ್ಗೆ ಚರ್ಚೆ ನಡೆಸಿದ್ದಾರೆ.
ಇನ್ನೂ ಈ ಔತಣಕೂಟದಲ್ಲಿ ಸಚಿವರಾದ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ, ಸತೀಶ ಜಾರಕಿಹೊಳಿ, ಬಿ.ಝೆಡ್. ಜಮೀರ್ ಅಹಮದ್ ಖಾನ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಶಾಸಕ ಕೆ.ಎನ್. ರಾಜಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.
ರಾಜ್ಯ ರಾಜಕೀಯ ಮತ್ತು ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.
ಕೆಲವು ವಿಚಾರಗಳಲ್ಲಿ ಮುಖ್ಯಮಂತ್ರಿ ಮೌನ ವಹಿಸಿರುವ ಬಗ್ಗೆಯೂ ಸುದೀರ್ಘ ಚರ್ಚೆ ನಡೆದಿದೆ. ಪಕ್ಷದಲ್ಲಿ ಕೆಲವು ನಿರ್ಧಾರಗಳನ್ನು ಏಕಪಕ್ಷೀಯ ತೆಗೆದುಕೊಳ್ಳುತ್ತಿರುವ ಬಗ್ಗೆಯೂ ವಿಷಯ ಪ್ರಸ್ತಾಪವಾಗಿದೆ ಎಂದು ಮೂಲಗಳು ಹೇಳಿವೆ.