ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಸಭೆಯನ್ನ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ್ದಾರೆ. ನಿಗಮದ ಹಲವು ವಿಚಾರಗಳನ್ನು ಸಿಎಂ ಚರ್ಚಿಸಿದರು.ನಿಗಮದಲ್ಲಿರುವಂತ ಸಮಸ್ಯೆಗಳನ್ನ ಶೀಘ್ರದಲ್ಲಿಯೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ನಿಗಮಕ್ಕೆ ಬೇಕಾದ ಅನುದಾನದ ಕುರಿತು ಸಿಎಂ ಜೊತೆ ಸಚಿವ ಈಶ್ವರ್ ಖಂಡ್ರೆ ಚರ್ಚೆ ನಡೆಸಿದ್ದಾರೆ.ಈ ವೇಳೆ ತೋಟಗಾರಿಕೆ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್ . ಮಲ್ಲಿಕಾರ್ಜುನ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಡಾ.ಕೆ. ಗೋವಿಂದರಾಜು, ನಸೀರ್ ಅಹ್ಮದ್ ,ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ. ಈ. ವಿ. ರಮಣ ರೆಡ್ಡಿ ಉಪಸ್ಥಿತರಿದ್ದರು.