ಸಚಿವರಿಗೆ ಔತಣ ಕೂಟ ನೀಡಲಿರುವ ಸಿಎಂ ಸಿದ್ದರಾಮಯ್ಯ: ಇದರ ಹಿಂದಿದೆ ಬೇರೆಯೇ ಪ್ಲ್ಯಾನ್

Krishnaveni K
ಗುರುವಾರ, 9 ಅಕ್ಟೋಬರ್ 2025 (10:30 IST)
ಬೆಂಗಳೂರು: ಅಕ್ಟೋಬರ್ 13 ರಂದು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ ನೀಡಲು ಮುಂದಾಗಿದ್ದಾರೆ. ಆದರೆ ಈ ಔತಣಕೂಟದ ಹಿಂದೆ ಸಿದ್ದರಾಮಯ್ಯ ಪ್ಲ್ಯಾನ್ ಬೇರೆಯೇ ಇದೆ.

ಸಿಎಂ ಸಿದ್ದರಾಮಯ್ಯ ಸೋಮವಾರ ರಾತ್ರಿ ತಮ್ಮ ಸರ್ಕಾರದ ಎಲ್ಲಾ ಸಹೋದ್ಯೋಗಿಗಳಿಗೆ ಔತಣಕೂಟಕ್ಕೆ ಆಹ್ವಾನವಿತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿಗಳ ಕಚೇರಿಯಿಂದಲೇ ಎಲ್ಲಾ ಸಚಿವರಿಗೆ ಆಹ್ವಾನ ನೀಡಲಾಗಿದೆ. ಆದರೆ ಈ ಔತಣಕೂಟದ ಹಿಂದೆ ಬೇರೆಯೇ ಲೆಕ್ಕಾಚಾರವಿರಲಿದೆ ಎಂದು ಹೇಳಲಾಗುತ್ತಿದೆ.

ರಾಜ್ಯ ಸರ್ಕಾರಕ್ಕೆ 2.5 ವರ್ಷ ಪೂರೈಸುತ್ತಿದ್ದು ಸಚಿವ ಸಂಪುಟ ಪುನರಾರಚನೆ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಸುಮಾರು 10 ರಿಂದ 12 ಹಾಲಿ ಸಚಿವರಿಗೆ ಕೊಕ್ ನೀಡಲಾಗುತ್ತದೆ ಎನ್ನಲಾಗುತ್ತಿದೆ. ಅವರ ಬದಲಿಗೆ ತಮ್ಮ ಆಪ್ತ ನಾಗೇಂದ್ರ ಸೇರಿದಂತೆ ಹಲವರಿಗೆ ಅವಕಾಶ ನೀಡಲು ಸಿಎಂ ಸಿದ್ಧತೆ ನಡೆಸಿದ್ದಾರೆ.

ಇದಕ್ಕಾಗಿಯೇ ಈ ಔತಣ ಕೂಟ ಎನ್ನಲಾಗುತ್ತಿದೆ. ಔತಣಕೂಟದ ನೆಪದಲ್ಲಿ ಸಚಿವರ ಮನವೊಲಿಸಲು ಸಿಎಂ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಂಪುಟ ಪುನರಾರಚನೆ ಎಂದರೆ ಹಾವಿನ ಹುತ್ತಕ್ಕೆ ಕೈ ಹಾಕಿದಂತೆ. ಹೀಗಾಗಿ ಯಾವುದೇ ಅಸಮಾಧಾನ ಮೂಡದೇ ಇರಲು ಸಿಎಂ ಔತಣ ಕೂಟದ ನೆಪ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಗದಲ್ಲಿ ದಂತ ಕಳೆದುಕೊಂಡ ಭೀಮಾ, ಇದು ಮೈಸೂರು ದಸರಾದ ಎಲ್ಲರ ಫೇವರೇಟ್‌ ಆನೆಯಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಮಾತ್ರವಲ್ಲ ದುಡ್ಡು ಕೊಟ್ರೆ ಇದೆಲ್ಲಾ ಸಿಗುತ್ತೆ: video

ರೋಲರ್ ಕಾಸ್ಟರ್ ನಲ್ಲಿ ಕೂತಿದ್ದವಳ ಪ್ರಾಣ ಪಕ್ಷಿಯೇ ಹಾರಿಹೋಯ್ತು video

ಪರಪ್ಪನ ಅಗ್ರಹಾರ ಕರ್ಮಕಾಂಡಕ್ಕೆ ನೆಪ ಹೇಳಿದ ಸಿಎಂಗೆ ದರ್ಶನ್ ವಿಚಾರದಲ್ಲಿರುವ ಅರ್ಜೆಂಟ್ ಈಗ್ಯಾಕಿಲ್ಲ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments