ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

Krishnaveni K
ಶನಿವಾರ, 1 ನವೆಂಬರ್ 2025 (10:22 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವದಂದು ಸಿಎಂ ಸಿದ್ದರಾಮಯ್ಯ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದಾರೆ. ಈ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ ‘ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು - ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ’ ಎಂದಿದ್ದಾರೆ.

‘ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ.

ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ - ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂಬ ಆದೇಶವನ್ನು ಹೊರಡಿಸಿದ್ದೇವೆ. ಬೇರೆ ಭಾಷೆಗಳನ್ನು ಗೌರವಿಸೋಣ. ನೆಲದ ಭಾಷೆ ಕನ್ನಡವನ್ನು ಪ್ರೀತಿಸೋಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಕರ್ನಾಟಕದಲ್ಲಿ ಭೂಕಂಪ: ವಿಜಯಪುರ ಸುತ್ತಮುತ್ತ ಕಂಪಿಸಿದ ಭೂಮಿ

ಕನ್ನಡ ರಾಜ್ಯೋತ್ಸವ: ಇಂದು ಪ್ರಶಸ್ತಿ ವಿತರಣೆ ಎಷ್ಟು ಗಂಟೆಗೆ, ಎಲ್ಲಿ ಇಲ್ಲಿದೆ ಮಾಹಿತಿ

Karnataka Weather: ವಾರಂತ್ಯಕ್ಕೆ ಮಳೆಯ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಮುಂದಿನ ಸುದ್ದಿ
Show comments