ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕದನ ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರ ನಿರ್ಧಾರ ಗಮನಿಸಿದರೆ ಕುತೂಹಲ ಮೂಡುವುದಂತೂ ಸಹಜ.
ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ-ಡಿಕೆಶಿ ನಡುವೆ ತೆರೆಮರೆಯಲ್ಲೇ ಹಗ್ಗಜಗ್ಗಾಟ ನಡೆಯುತ್ತಿರುವುದು ಈಗ ಗುಟ್ಟಾಗಿಯೇನೂ ಉಳಿದಿಲ್ಲ. ಇದರ ನಡುವೆ ಡಿಕೆ ಶಿವಕುಮಾರ್ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದೆಹಲಿಗೆ ತೆರಳಿದ್ದರು.
ದೆಹಲಿಗೆ ತೆರಳಿದ್ದಾರೆ ಎಂದರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡದೇ ಇರಲ್ಲ ಎನ್ನುವುದು ಎಲ್ಲರ ಲೆಕ್ಕಾಚಾರ. ಹೀಗಾಗಿಯೇ ಸಿಎಂ ಸಿದ್ದರಾಮಯ್ಯರನ್ನು ನೀವೂ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡುತ್ತೀರಾ ಎಂದು ಪತ್ರಕರ್ತರು ಕೇಳಿದ್ದಾರೆ.
ಇದಕ್ಕೆ ಡಿಕೆಶಿ ಬೇಕಾದರೆ ಹೋಗಲಿ, ಯಾರು ಬೇಡ ಅಂತಾರೆ. ನಾನು ಆಹ್ವಾನವಿಲ್ಲದೇ ಹೋಗಲ್ಲ ಎಂದಿದ್ದಾರೆ. ಕೆಸಿ ವೇಣುಗೋಪಾಲ್ ಮೂಲಕ ಹೈಕಮಾಂಡ್ ನಾಯಕರು ಕರೆದರೆ ಮಾತ್ರ ದೆಹಲಿಗೆ ಹೋಗಿ ಮಾತುಕತೆ ನಡೆಸುವುದಾಗಿ ಸ್ಪಷ್ಟ ನಿರ್ಧಾರ ಕೈಗೊಂಡಿದ್ದಾರೆ ಸಿದ್ದರಾಮಯ್ಯ.