ವಿಪಕ್ಷಗಳು ಪಾದಯಾತ್ರೆಗೆ ಸಿದ್ಧತೆ ಮಾಡಿದ್ದರೆ ಸೈಲೆಂಟ್ ಆಗಿ ಸಿಎಂ ಸಿದ್ದರಾಮಯ್ಯ ಇಲ್ಲಿದ್ದಾರೆ ನೋಡಿ

Krishnaveni K
ಶುಕ್ರವಾರ, 2 ಆಗಸ್ಟ್ 2024 (16:44 IST)
ಕೊಡಗು: ಮುಡಾ ಹಗರಣ ವಿಚಾರವಾಗಿ ಒಂದೆಡೆ ವಿಪಕ್ಷಗಳು ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದರೆ ಇತ್ತ ಸಿಎಂ ಸಿದ್ದರಾಮಯ್ಯ ಮಾತ್ರ ಇದೆಲ್ಲಾ ಬಿಟ್ಟು ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. 
 
ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು , ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು. 
 
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments