ಬೆಂಗಳೂರು: ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ, ಅವರ ಆರೋಗ್ಯ ಉತ್ತಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಸಚಿವ ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ಸುಧಾರಣೆಯಾಗಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ, ಅವರ ಆರೋಗ್ಯವೀಗ ಉತ್ತಮವಾಗಿದೆ ಎಂದರು.
ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದ ಬಗ್ಗೆ ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿ ತಮ್ಮ ತಂದೆಯ ಆರೋಗ್ಯದ ಕುರಿತು ಅಪ್‌ಡೇಟ್ ಹಂಚಿಕೊಂಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸ್ಥಿರವಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಪ್ರಿಯಾಂಕ್, "ಶ್ರೀ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸಲು ಸಲಹೆ ನೀಡಲಾಯಿತು ಮತ್ತು ಯೋಜಿತ ಕಾರ್ಯವಿಧಾನಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸ್ಥಿರವಾಗಿದ್ದಾರೆ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.