Daily Horoscope
✕

ಗುಂಡಿ ಪರಿಶೀಲಿಸಲು ಸ್ವತಃ ರಸ್ತೆಗಿಳಿದ ಸಿಎಂ ಸಿದ್ದರಾಮಯ್ಯ

Krishnaveni K
ಶನಿವಾರ, 27 ಸೆಪ್ಟಂಬರ್ 2025 (17:47 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಅವ್ಯವಸ್ಥೆ ವೀಕ್ಷಿಸಲು ಖುದ್ದಾಗಿ ಸಿಎಂ ಸಿದ್ದರಾಮಯ್ಯ ರಂಗಕ್ಕಿಳಿದಿದ್ದಾರೆ.

ಇಂದು ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ಮಾಡಿದ ಸಿಎಂ ಸಿದ್ದರಾಮಯ್ಯ ರಸ್ತೆ ಗುಂಡಿ, ಮೆಟ್ರೋ ಕಾಮಗಾರಿಯಿಂದಾಗಿ ರಸ್ತೆ ಅವ್ಯವಸ್ಥೆಯಾಗಿರುವುದರ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳ ಅವ್ಯವಸ್ಥೆ ಸರಿಪಡಿಸಲು ಸೂಚನೆ ನೀಡಿದ್ದಾರೆ.

‘ವೈಟ್ ಟಾಪಿಂಗ್‌ ಅಡಿ ಅಭಿವೃದ್ಧಿಪಡಿಸಲಾದ ರಸ್ತೆಗಳಲ್ಲಿ ಗುಂಡಿಗಳು ಬಿದ್ದರೆ ಅದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಓಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ. ವೈಟ್ ಟಾಪಿಂಗ್ ಕಾಮಗಾರಿ 2-3 ವರ್ಷಗಳ ಕಾಲ ನಡೆಯಲಿದೆ. ಈ ಅವಧಿಯಲ್ಲಿ ಗುತ್ತಿಗೆದಾರರೇ ರಸ್ತೆಗಳ ನಿರ್ವಹಣೆ ಮಾಡಬೇಕು ಎಂಬ ನಿಯಮವಿದೆ.
ಆದರೆ ಬಾಗಲೂರು ರಸ್ತೆಯ ಸಮರ್ಪಕ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ವೈಟ್ ಟಾಪಿಂಗ್‌ನ ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ’ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಹೆಬ್ಬಾಳ, ಹೆಣ್ಣೂರು-ಬಾಗಲೂರು ರಸ್ತೆ ಬಳಿ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೆಣ್ಣೂರಿನ ಬಾಗಲೂರು ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ರಸ್ತೆಗುಂಡಿಗಳ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments