Select Your Language

Notifications

webdunia
webdunia
webdunia
webdunia

ಎಸ್ಸೆಸ್ಸೆಲ್ಸಿ ಗ್ರೇಸ್ ಮಾರ್ಕ್‌ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

Chief Minister Siddarmaiah

Sampriya

ಬೆಂಗಳೂರು , ಶುಕ್ರವಾರ, 17 ಮೇ 2024 (15:18 IST)
ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂಬರುವ ವರ್ಷದಿಂದ ಎಸ್ಸೆಸ್ಸೆಲ್ಸಿ ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೀಡಿದ ಗ್ರೇಸ್ ಮಾರ್ಕ್ ಸಂಬಂಧ ಅಧಿಕಾರಿಗಳನ್ನು ಅವರು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದು ಯಾವ ಕಾರಣ ಮತ್ತು ಉದ್ದೇಶದಿಂದ ಎಂದು ಪ್ರಶ್ನಿಸಿದರು.

ವಿದ್ಯಾರ್ಥಿಗಳು ಅವರ ಸಾಮರ್ಥ್ಯದ ಅನುಗುಣವಾಗಿ ಅಂಕ ಸಾಧಿಸಬೇಕು. ಗ್ರೇಸ್ ಮಾರ್ಕ್ಸ್ ನೀಡಿದರೆ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗಲ್ವಾ? ಕಡಿಮೆ ಅಂಕ ಪಡೆದರೆ ವಿದ್ಯಾರ್ಥಿಗಳು ಅನರ್ಹರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳನ್ನು ಪ್ರಶ್ನಿಸಿದರು. ಶಿವಕುಮಾರ್​ ಮಾತಿಗೆ ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದರು.

ಕೋವಿಡ್ ಸಮಯದಲ್ಲಿ 5-10 ಗ್ರೇಸ್ ಮಾರ್ಕ್ಸ್ ನೀಡುತ್ತಿದ್ದನ್ನು ಅದನ್ನು ಈಗ ಹೆಚ್ಚಿಸಿದ್ದೇವೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈಗ ಕೋವಿಡ್​ ಇದೆಯೇನ್ರೀ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

Share this Story:

Follow Webdunia kannada

ಮುಂದಿನ ಸುದ್ದಿ

ಪುಸ್ತಕ ಯಾವಾಗ ಬರುತ್ತದೆ ಗೊತ್ತಿಲ್ಲ, ವಿದ್ಯಾರ್ಥಿಗಳ ಜೊತೆ ಸರ್ಕಾರ ಚೆಲ್ಲಾಟ: ಸುರೇಶ್ ಕುಮಾರ್