Publish Date: Fri, 10 Nov 2017 (15:11 IST)
Updated Date: Fri, 10 Nov 2017 (15:13 IST)
ಸಿಎಂ ಸಿದ್ದರಾಮಯ್ಯ ಓರ್ವ ಬಚ್ಚಾ. ಲಜ್ಜಗೆಟ್ಟ ನಡುವಳಿಕೆಯ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿವರ್ತನಾ ಯಾತ್ರೆಗೆ ಜನರೇ ಬರುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ತಾಕತ್ತಿದ್ರೆ ಯಾತ್ರೆಯಲ್ಲಿ ಜನ ಸೇರಿರುವುದನ್ನು ಬಂದ ನೋಡಲಿ ಎಂದು ಸವಾಲ್ ಹಾಕಿದರು.
ಪವಿತ್ರ ಸ್ಥಳವಾದ ಧರ್ಮಸ್ಥಳಕ್ಕೆ ಮಾಂಸ ತಿಂದು ಹೋಗುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ವೇಣುಗೋಪಾಲ್ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ ಎಂದು ಲೇವಡಿ ಮಾಡಿದರು.
ಹೆಣ್ಣುಮಕ್ಕಳು ಇರುವ ಕಡೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಬರಲು ಬಿಡಬೇಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.