Webdunia - Bharat's app for daily news and videos

Install App

ಜಾತಿ ಗಣತಿ ವರದಿಯ ಸದ್ದಿನ ಮಧ್ಯೆಯೇ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Sampriya
ಸೋಮವಾರ, 14 ಏಪ್ರಿಲ್ 2025 (18:37 IST)
ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಜಾತಿ ಗಣತಿ ವರದಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಹೊಸ ಘೋಷಣೆಯೊಂದನ್ನು ಮಾಡಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲಿ ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ವಿಧಾನಸೌಧದ ‌ಮೆಟ್ಟಿಲುಗಳ ಮೇಲೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ ಎಂದು ಅವರು ಹೇಳಿದರು.  

ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ, ಅಸ್ಪ್ರಶ್ಯತೆ ತೊಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ, ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅಂಬೇಡ್ಕರ್ ಇಲ್ಲ ಅಂದಿದ್ರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ ಎಂದರು.

ದಲಿತ ಸಂಘರ್ಷ ಸಮಿತಿಯ ಸಾರಾಯಿ ಬೇಡ, ಶಾಲೆ ಬೇಕು ಎನ್ನುವ ಘೋಷ ವಾಕ್ಯ ಮೂಲಕ ನಾನು ಡಿಸಿಎಂ ಆಗಿದ್ದ ವೇಳೆ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments