Select Your Language

Notifications

webdunia
webdunia
webdunia
webdunia

ರೈತರಿಗೆ, ಬಡವರಿಗೆ ವರವಾಗಲಿದೆಯೇ ಸಿಎಂ ಸಿದ್ದರಾಮಯ್ಯ ಬಜೆಟ್? ಇಲ್ಲಿದೆ ನೋಡಿ ಡಿಟೇಲ್ಸ್

ರೈತರಿಗೆ, ಬಡವರಿಗೆ ವರವಾಗಲಿದೆಯೇ ಸಿಎಂ ಸಿದ್ದರಾಮಯ್ಯ ಬಜೆಟ್? ಇಲ್ಲಿದೆ ನೋಡಿ ಡಿಟೇಲ್ಸ್
ಬೆಂಗಳೂರು , ಸೋಮವಾರ, 13 ಮಾರ್ಚ್ 2017 (15:21 IST)
ರೈತರಿಗೆ ಸಂತಸದ ಸುದ್ದಿಯೊಂದು ಬರಲಿದೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಯಲ್ಲಿ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯದ 14 ಲಕ್ಷ 72 ಸಾವಿರ ರೈತರ ಸಾಲವನ್ನು ಮನ್ನಾ ಮಾಡುವ ಬಗ್ಗೆ ಸರಕಾರ ಚಿಂತನೆ ನಡೆಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 11 ಸಾವಿರ ಕೋಟಿ ರೂಪಾಯಿಗಳ ಹೊರೆಯಾಗಲಿದೆ.
 
ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಾಗಲಿರುವುದರಿಂದ ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ, ಜನಪರ, ರೈತ ಪರವಾಗಿರೋ ಬಜೆಟ್ ಮಂಡಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ.   
 
ಕಾಂಗ್ರೆಸ್ ಸರಕಾರ ರೈತರ ಅರ್ಧದಷ್ಟು ಸಾಲ ಮನ್ನಾ ಮಾಡಲಿ. ಉಳಿದರ್ಧ ಸಾಲವನ್ನು ಕೇಂದ್ರ ಸರಕಾರದಿಂದ ಮನ್ನಾ ಮಾಡಿಸುವುದು ನಮ್ಮ ಹೊಣೆ ಎಂದು ಬಿಜೆಪಿ ಸರಕಾರಕ್ಕೆ ಸವಾಲ್ ಹಾಕಿತ್ತು.
 
ಇದೀಗ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಮಾಡಿ, ಬಿಜೆಪಿಗೆ ಇನ್ನರ್ಧ ಸಾಲವನ್ನು ಮನ್ನಾ ಮಾಡಿಸಿ ನಿಮ್ಮ ಮಾತನ್ನು ಉಳಿಸಿಕೊಳ್ಳಿ ಎನ್ನುವ ಸವಾಲ್ ಹಾಕುವ ರಣತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ. ಇಲ್ಲವಾದಲ್ಲಿ ಇದೊಂದು ರೈತ ವಿರೋಧಿ ಪಕ್ಷ ಎನ್ನುವ ಪಟ್ಟ ಕಟ್ಟಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ಮಾರ್ಚ್ 15 ರಂದು ಬಜೆಟ್ ಮಂಡಿಸಲಿದ್ದು, ಬಜೆಟ್ ಸಾಮಾನ್ಯ ಜನತೆಯ, ರೈತ ಪರ ಬಜೆಟ್ ಆಗಿರಲಿದೆಯೇ ಎನ್ನುವುದನ್ನು ಕಾದುನೋಡಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸಚಿವ ತನ್ವೀರ್ ಸೇಠ್ ಸ್ಪಷ್ಟನೆ